ಕೊಬ್ಬರಿ ಮತ್ತು ತೆಂಗಿನಕಾಯಿಗೆ ಬೆಂಬಲ ಬೆಲೆ ನೀಡಬೇಕು : ಮನವಿ
0
ಕೊಬ್ಬರಿ ಮತ್ತು ತೆಂಗಿನಕಾಯಿಗೆ ಬೆಂಬಲ ಬೆಲೆ ನೀಡುವ ಮತ್ತು ನಾಫೆಡ್ ಮೂಲಕ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಕೋರಿ ಅರಸೀಕೆರೆ ಮತ್ತು ಶ್ರವಣಬೆಳಗೊಳ ಕ್ಷೇತ್ರದ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ ಹಾಗೂ ಸಿ.ಎನ್.ಬಾಲಕೃಷ್ಣ ಇಂದು ಮಾನ್ಯ ಮುಖ್ಯಮಂತ್ರಿ ಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.