ರಾಜ್ಯದಲ್ಲಿ ಗುಡುಗು ಸಹಿತ ಭಾರಿಮಳೆ

ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಬರಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ರಾಜ್ಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಮೇ.31ರಿಂದ ಜೂನ್ 3ರವರೆಗೆ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಬರಲಿದೆ ಎಂದು ತಿಳಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ರಾಜ್ಯ ಹವಾಮಾನ ಇಲಾಖೆ, ರಾಜ್ಯದಲ್ಲಿ ಮೇ.31ರ ನಾಳೆಯಿಂದ ಜೂನ್ 3ರವರೆಗೆ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಬರಲಿದೆ ಎಂಬುದಾಗಿ ತಿಳಿಸಿದೆ.

ಮೇ.31ರಂದು ಗುಡುಗು ಸಹಿತ ಭಾರಿಮಳೆ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬರಲಿದೆ. ಜೂನ್ 1ರಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆ ಚಿಕ್ಕಮಗಳೂರು, #ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬರಲಿದೆ ಎಂದು ತಿಳಿಸಿದೆ.

Post a Comment

Previous Post Next Post