ಹಾಸನ ಜಿಲ್ಲೆಯಲ್ಲಿಂದು 22 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 404 ಕ್ಕೆ ಏರಿಕೆಯಾಗಿದೆ. ಇಂದು ಮಧ್ಯಾಹ್ನದ ನಂತರ 15 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಅವರಲ್ಲಿ ಹೊಳೆನರಸೀಪುರ ತಾಲ್ಲೂಕಿನಿಂದ 11 ಮಂದಿ, ಒಬ್ಬರು ಚನ್ನರಾಯಪಟ್ಟಣ ತಾಲ್ಲೂಕಿಗೆ ಸೇರಿದವರು ಹಾಗೂ 3 ಜನ ಹಾಸನ ತಾಲ್ಲೂಕಿಗೆ ಸೇರಿದವರಾಗಿದ್ದಾರೆ ಅಲ್ಲದೆ ಮಧ್ಯಾಹ್ನದ ನಂತರ 7 ಪ್ರಕರಣ ಖಚಿತವಾಗಿದ್ದು, ಅದನ್ನು ನಾಳಿನ ವರದಿಯಲ್ಲಿ ಸೇರ್ಪಡೆ ಮಾಡಿ ನೀಡಲಾಗುವುದು ಎಂದು ಅವರು ಹೇಳಿದರು. ಎಂದರು.
ಕೊರೋನಾ ಸೋಂಕಿತರಲ್ಲಿ ಇದುವರೆಗೂ 276 ಜನರು ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಕೊವೀಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 148 ಮಂದಿ ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಮಾಹಿತಿ ನೀಡಿದರು.
ಜಿಲ್ಲೆಯ ಸಾರ್ವಜನಿಕರಲ್ಲಿ ಹೆಚ್ಚಿನ ಸಂಪರ್ಕದಲ್ಲಿರುವಂತಹ ಸವಿತ ಸಮಾಜದವರು ಹಾಗೂ ಮೆಡಿಕಲ್ ಸಿಬ್ಬಂದಿಗಳಿಗೆ ಇಂದು ಕೋವಿಡ್-19 ಪರೀಕ್ಷೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
ಇಂದು ಪತ್ತೆಯಾದ ಕೋವಿಡ್ ಪ್ರಕರಣಗಳಲ್ಲಿ 4 ಮಂದಿ ಪೊಲೀಸರಿದ್ದು ಒಬ್ಬರು ಹೊಳೆನರಸೀಪುರ ತಾಲ್ಲೂಕಿಗೆ ಸೇರಿದವರಾಗಿದ್ದರೆ. ಇನ್ನುಳಿದ ಮೂರು ಮಂದಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಅವರೆಲ್ಲರ ಪ್ರಥಮ ಸಂಪರ್ಕಿತರನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಡಾ|| ಸತೀಶ್ ಮಾಹಿತಿ ನೀಡಿದರು.
Tags
ಹಾಸನ