ಅರಕಲಗೂಡು : ತಮ್ಮ ಜೀವವನ್ನು ಲೆಕ್ಕಿಸದೆ ಸೈನಿಕರಂತೆ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರ ಸೇವೆ ಕೊರೊನಾ ಪರಿಸ್ಥಿತಿಯಲ್ಲಿ ಶ್ಲಾಘನೀಯ ಎಂದು ಶಾಸಕ ಎ.ಟಿ.ರಾಮಸ್ವಾಮಿ ಪ್ರಶಂಸಿಸಿದರು.
ಪಟ್ಟಣದ ಬಿ ಎಂ ಶೆಟ್ಟಿ ಪ್ರಥಮದರ್ಜೆ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಸಹಕಾರ ಬ್ಯಾಂಕ್ ನ ವತಿಯಿಂದ ಕೊಣನೂರು, ಹಂಡ್ರAಗಿ, ಬನ್ನೂರು ಮತ್ತು ಸರಗೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ 3 ಸಾವಿರ ರೂಗಳ ಸಹಾಯಧನದ ಚೆಕ್ ವಿತರಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಒಟ್ಟು 31 ಕಾರ್ಯಕತೆಯರಿಗೆ ಸನ್ಮಾನಿಸಿ ಚೆಕ್ ವಿತರಿಸಲಾಯಿತು. ತಾಲ್ಲೂಕು ರೆಡ್ ಕ್ರಾಸ್ ಸಂಸ್ಥೆಯವತಿಯಿAದ ಪ್ರತಿ ಆಶಾ ಕಾರ್ಯಕರ್ತೆಯರಿಗೆ ಜೂಸ್, ಮಾಸ್ಕ್ ಮತ್ತು ಸೋಪ್ ನ್ನು ವಿತರಿಸಲಾಯಿತು.
ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ಎಸ್.ಸತೀಶ್, ಹಾರಂಗಿಮಹಾಮಂಡಳದ ಅಧ್ಯಕ್ಷ ಎಸ್.ಸಿ,ಚೌಡೇಗೌಡ, ಕೊಣನೂರು ಸಹಕಾರ ಸಂಘದ ಅಧ್ಯಕ್ಷ ಎಸ್.ನಾಗರಾಜು, ಉಪಾಧ್ಯಕ್ಷ ಯೋಗಾಚಾರ್, ಕೊಣನೂರು, ಹಂಡ್ರಂಗಿ, ಬನ್ನೂರು ಮತ್ತು ಸರಗೂರು ಸಂಘಗಳ ಅಧ್ಯಕ್ಷರು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿದ್ದರು.
Tags
ಅರಕಲಗೂಡು