ಜಿಲ್ಲೆಯಲ್ಲಿ ಹೊಸದಾಗಿ 5 ಕೋವಿಡ್-19 ಪ್ರಕರಣ ಪತ್ತೆ

ಹಾಸನ:- ಜಿಲ್ಲೆಯಲ್ಲಿ ಹೊಸದಾಗಿ 5 ಕೋವಿಡ್-19 ಪ್ರಕರಣ ಪತ್ತೆಯಾಗಿದ್ದು, ಸೋಂಕಿತರೆಲ್ಲ ಚನ್ನರಾಯಪಟ್ಟಣ ತಾಲ್ಲೂಕಿನವರಾಗಿದ್ದು, ಮುಂಬೈ ನಿಂದ ಬಂದಿರುತ್ತಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 209ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ. 
ಇದುವರೆಗೆ 124 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 85 ಮಂದಿ ಸಕ್ರಿಯ ಸೋಂಕಿತರು  ಚಿಕಿತ್ಸೆ ಪಡೆಯುತ್ತಿದ್ದಾರೆ .

Post a Comment

Previous Post Next Post