ಹಾಸನದಲ್ಲಿ ರಾತ್ರಿ 8 ಗಂಟೆಯಿಂದ ಬೆಳಗ್ಗೆ 05ಗಂಟೆಯವರೆಗೆ ನಿಷೇದಾಜ್ಞೆ ಜಾರಿ

ಹಾಸನ ಜಿಲ್ಲೆಯಲ್ಲಿ ಇಂದಿನಿಂದ ರಾತ್ರಿ 8 ಗಂಟೆಯಿಂದ ಬೆಳಗ್ಗೆ 05ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ
ಹಾಸನದ ಜಿಲ್ಲಾಧಿಕಾರಿ ಸಿ.ಆರ್.ಪಿ.ಸಿ ಸೆಕ್ಷನ್ 144 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಕೆಳಕಂಡ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿರುತ್ತರೆ. 

1 ಹಾಸನ ಜಿಲ್ಲೆಯಾದ್ಯಂತ ದಿನಾಂಕ : 29 / 06 / 2020 ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಪ್ರತಿದಿನ ರಾತ್ರಿ 8-00 ಗಂಟೆಯಿಂದ ಬೆಳಗ್ಗೆ 5-00 ವರಗೆ ಕರ್ಪ್ಯೂ ಜಾರಿಯಲ್ಲಿರುತ್ತದೆ . ಈ ಕರ್ಪ್ಯೂ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ . 

2 ದಿನಾಂಕ : 05 / 07 / 2020 ರ ಭಾನುವಾರದಿಂದ ಮುಂದಿನ ನಾಲ್ಕು [ 4 ) ಭಾನುವಾರಗಳು ಅಂದರೆ ದಿನಾಂಕ : 02 / 08 / 2020 ರ ವರೆಗಿನ ಎಲ್ಲಾ ಭಾನುವಾರಗಳಂದು ಪೂರ್ಣ ದಿನದ ಲಾಕ್‌ಡೌನ್ ಇರತಕ್ಕದ್ದು . ಆದರೆ ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲ ,

Post a Comment

Previous Post Next Post