ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ

ಹಾಸನ.ಜೂ.25:- ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಇಂದು ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಎಸ್.ಎಸ್.ಎಲ್.ಸಿ ಪರೀಕ್ಷೆ ವ್ಯವಸ್ಥೆಯ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿದ ವಿದ್ಯಾರ್ಥಿಗಳ ತಪಾಸಣೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾಡಿರುವ ವ್ಯವಸ್ಥೆ ಪರಿಶೀಲಿಸಿ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು. ಜಿಲ್ಲಾಡಳಿತ ಎಲ್ಲಾ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಎದುರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

Post a Comment

Previous Post Next Post