ಹಾಸನ; ಪಡಿತರ ಆಹಾರಧಾನ್ಯ ಅಕ್ರಮವೆಸಗಿದರೆ ಅಂತಹ ನ್ಯಾಯ ಬೆಲೆ ಅಂಗಡಿ ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಖಾತೆ ಸಚಿವ ಕೆ.ಗೋಪಾಲಯ್ಯ ಎಚ್ಚರಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಯಾವುದೇ ಪಡಿತರ ವಿತರಣೆ ನ್ಯಾಯಬೆಲೆ ಅಂಗಡಿಯ ಆಹಾರಧಾನ್ಯ ಕಳ್ಳಸಾಗಣೆಯನ್ನು ಇಲಾಖೆ ಗಂಭೀರವಾಗಿ ಪರಿಗಣಿಸಲಿದೆ. ಅಕ್ರಮವೆಸಗಿದವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲಾಗುವುದು ಈ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು
ಗುಲ್ಬರ್ಗದಲ್ಲಿ 2000 ಕ್ವಿಂಟಲ್ ಅಕ್ಕಿ ಅಕ್ರಮ ಸಾಗಣೆ ಬಗ್ಗೆ ವರದಿಯಾಗಿತ್ತು ತನಿಖೆ ನಂತರ ಅಕ್ರಮವೆಸಗಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ ಎಂದು ತಿಳಿಸಿದರು.ರಾಜ್ಯದಲ್ಲಿ ಅಕ್ರಮ ಪಡಿತರ ಸಾಗಣೆ ಕಂಡಕೂಡಲೇ ಆಯಾ ಜಿಲ್ಲಾಧಿಕಾರಿಗಳು ಕ್ರಮವಹಿಸಬೇಕು ಅಲ್ಲಿನ ಆಹಾರ ದಾಸ್ತಾನು ಗೊಡೌನ್ ಗಳನ್ನು ಪರಿಶೀಲನೆ ನಡೆಸಿ ಆಹಾರಧಾನ್ಯ ಸಾಗಣೆ ಕುರಿತು ಯಾವುದೇ ಸೂಕ್ತ ದಾಖಲೆ ಇಲ್ಲದ ಪಕ್ಷದಲ್ಲಿ ಅದನ್ನು ವಶಕ್ಕೆ ಪಡೆದು ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.
ವಿದ್ಯಾರ್ಥಿಗಳಿಗೆ ಸಚಿವರ ಅಭಯ
ಕೊರೋನಾ ಹಾವಳಿ ಹಿನ್ನೆಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಶಿಕ್ಷಣ ಇಲಾಖೆ ವತಿಯಿಂದ ಸೂಕ್ತ ಮಾರ್ಗದರ್ಶನ ಹಾಗೂ ಸಲಹೆಗಳನ್ನು ನೀಡಲಾಗಿದೆ ಪರೀಕ್ಷೆಯಲ್ಲಿ ಹಾಜರಾಗುವ ವಿದ್ಯಾರ್ಥಿಗಳ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದ್ದು ಪೋಷಕರು ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವರು ಅಭಯ ನೀಡಿದರು.
ಹಾಸನ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ವರ್ಷಕ್ಕಿಂತ ಉತ್ತಮವಾಗಿರಲಿದೆ ಎಂದು ಭರವಸೆ ವ್ಯಕ್ತಪಡಿಸಿದೆ ಸಚಿವರು ಈ ನಿಟ್ಟಿನಲ್ಲಿ ಜಿಲ್ಲೆಯ ಶಿಕ್ಷಣ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದರು.