ಹಾಸನ.ಜೂ.12:- ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹದಿಹರೆಯದವರಿಗೆ ಹಾಗೂ ವಯಸ್ಕ ಮಕ್ಕಳನ್ನು ಹೊಂದಿರುವ ಪೋಷಕರಿಗೆ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಬಾಲ್ಯವಿವಾಹ ಮಾಡದರೆ ಪೋಕ್ಸ್ ಕಾಯ್ದ ಅಡಿಯಲ್ಲಿ ಶಿಕ್ಷೆಗೆ ಗುರಿಯಾಗುವ ಕುರಿತು ಜನರಿಗೆ ತಿಳುವಳಿಕೆ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವ ಕಚೇರಿ ಸಭಾಂಗಣದಲ್ಲಿಂದು ಡಿ.ಹೆಚ್.ಓ. ಡಾ|| ಸತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪಿ.ಸಿ.ಪಿ.ಎನ್.ಡಿ.ಟಿ ಸಲಹಾ ಸಮಿತಿ ಹಾಗೂ ಡಿ.ಐ.ಎಂ.ಪಿ.ಸಮಿತಿ ಸಭೆಯಲ್ಲಿ ಸದಸ್ಯರೆಲ್ಲರು ಚರ್ಚೆಯಲ್ಲಿ ಪಾಲ್ಗೋಂಡು ಕಾರ್ಯಕ್ರಮಗಳನ್ನು ಆಯೋಜಿಸಿ ಅರಿವು ಮೂಡಿಸುವುದು ಅತ್ಯಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಬಾಲ್ಯ ವಿವಾಹ, ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆಯಂತಹ ಕೃತ್ಯ ಎಸಗುವುದರಿಂದ ಹೆಣ್ಣು ಮಕ್ಕಳು ದೈಹಿಕ ಮತ್ತು ಮಾನಸಿಕ ತೊಂದರೆಗಳಿಗೆ ಒಳಗಾಗುವುದರ ಜೊತೆಗೆ ಸಮಾಜದಲ್ಲಿ ಸಂಭವಿಸುವ ಅನಾವುತಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡಲು ರೇಡಿಯೋ ಮೂಲಕ ಪೋನ್ ಇನ್ ಕಾರ್ಯಕ್ರಮ ಮಾಡುವುದರ ಮೂಲಕ ಹೆಚ್ಚು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬಹುದು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅದರಂತೆ ಕಾರ್ಯಕ್ರಮಗ:ಳನ್ನು ಆಯೋಜಿಸಲು ನಿರ್ಧರಿಸಲಾಯಿತು.
ಗ್ರಾಮೀಣ ಪ್ರದೇಶದಲ್ಲಿ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳನ್ನು ಪಾಲ್ಗೋಳುವಂತೆ ಮಾಡಿ ಸರ್ಕಾರದಿಂದ ದೊರಕುವ ಸೌಲಭ್ಯಗಳ ಕುರಿತು ಮಾಹಿತಿ ನೀಡುವ ಮೂಲಕ ಜನರಿಗೆ ಹೆಚ್ಚಿನ ಅರಿವು ಮೂಡಿಸೋಣ ಎಂದರು.
ಗ್ರಾಮೀಣ ಭಾಗದಲ್ಲಿ ಗೋಡೆ ಬರಹ ಬರೆಸಬೇಕು ಜೊತೆಗೆ ಗ್ರಾಮ ಪಂಚಾಯಿತಿಗಳಿಂದ ಕೊರೋನಾ-19 ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಸ್ಥಳೀಯ ದಿನಪತ್ರಿಕೆಗಳಲ್ಲಿ ಜಾಹಿರಾತು ನೀಡುತ್ತಿದ್ದಾರೆ. ಅದೇ ಜಾಹಿರಾತಿನಲ್ಲಿ ಒಂದು ಸಾಲು ಬಾಲ್ಯ ವಿವಾಹ ನಿಷೇಧ ಕುರಿತು ಪ್ರಕಟಿಸಿದರೆ ಉತ್ತಮ ಎಂದು ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.
ಆರ್.ಸಿಹೆಚ್.ಅಧಿಕಾರಿ ಡಾ|| ಕಾಂತರಾಜ್, ಸಮಿತಿಯ ಸದಸ್ಯರಾದ ಡಾ||ಭಾರತಿ ರಾಜಶೇಖರ್, ಡಾ|| ಸಾವಿತ್ರಿ, ಲೀಲಾವತಿ, ಡಾ|| ದಿನೇಶ್, ಡಾ|| ಶೈಲೇಶ್, ಕೆ.ಟಿ.ಜಯಶ್ರಿ, ರಿಹಾನಾ ಬಾನು, ಮಧುರಾ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.
Tags
ಹಾಸನ