ಹಾಸನ ಜೂ 18 : ಆಹಾರ,ನಾಗರೀಕ ಸರಬರಾಜು ಮಾತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವಾರಾದ ಕೆ ಗೋಪಾಲಯ್ಯ ಅವರು ಇಂದು ಎತ್ತಿನ ಹೊಳೆ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೊಂದು ಬಯಲು ಸೀಮೆಗೆ ನೀರು ಪೂರೈಸುವ ಮಹತ್ವದ ಯೋಜನೆ ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಿ ಎಂದುಸಚಿವರು ಅಧಿಕಾರಿಗಳಿಗೆ ಸೂಚಿಸಿದರು .
ಯೋಜನೆ ಉದ್ದೇಶಕ್ಕೆ ಸ್ವಾದೀನ ಪಡಿಸಿಕೊಂಡ ಜಮೀನನಿಗೆ ಬಾಕಿ ಇರುವ ಪರಿಹಾರವನ್ನು ಸಹ ಶೀಘ್ರವಾಗಿ ವಿತರಿಸಿ ಎಂದು ಸಚಿವರು ತಿಳಿಸಿದರು.
ಜಿಲ್ಲಾಧಿಕಾರಿ ಅರ್ .ಗಿರೀಶ್ ,ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್ ಉಪ ವಿಭಾಗಾಧಿಕಾರಿ ಗಿರಿಶ್ ನಂದನ್, ಎತ್ತಿನ ಹೊಳೆ ಹೋಜನೆ ಕಾರ್ಯಪಾಲಕ ಅಭಿಯಂತರರಾದ ಜಯಣ್ಣ, ತಹಶಿಲ್ದಾರ್ ಮಂಜುನಾಥ್ ,ಮಾಜಿ ಶಾಸಕರಾದ ಹೆಚ್.ಎಂ ವಿಶ್ವನಾಥ್ ಮತ್ತಿತರರು ಹಾಜರಿದ್ದರು
Tags
ಸಕಲೇಶಪುರ