ಎಸ್‌. ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಮಕ್ಕಳಿಗೆ ಮಾಸ್ಕ್ ವಿತರಣೆ

ಆಲೂರು : ಪ್ರಸಕ್ತ ಸಾಲಿನಲ್ಲಿ ನಮ್ಮ ಆಲೂರು ತಾಲ್ಲೂಕಿನಾದ್ಯಂತ ಆರು ಪರೀಕ್ಷಾ ಕೇಂದ್ರಗಳಲ್ಲಿ ಸಾವಿರದ ಐದು ಮಕ್ಕಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿದ್ದು ಎಲ್ಲಾ ಮಕ್ಕಳಿಗೆ ತಾಲ್ಲೂಕು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಾಸ್ಕ್ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಸುಜಾತ ಅಭಿಪ್ರಾಯಪಟ್ಟರು.
ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಆಲೂರು ಇವರು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಮಾಸ್ಕ್ ವಿತರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ನಮ್ಮ ತಾಲ್ಲೂಕಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಉತ್ತಮ ಸೇವಾ ಕಾರ್ಯ ಮಾಡುತ್ತಿದ್ದು, ಇತರೆ ಸಂಘಟನೆಗಳಿಗೆ ಮಾದರಿಯಾಗಿದೆ ಎಂದರು

Post a Comment

Previous Post Next Post