ನಾಳೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಂದ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ

 ಜೆಡಿಎಸ್ ಪಕ್ಷದ ಶಾಸಕರು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ನಾಳೆ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು. 

   ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರಿಗೆ ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ.

Post a Comment

Previous Post Next Post