ಹಾಸನ : ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಜೂನ್. 17 ಮತ್ತು 18 ರಂದು ಜಿಲ್ಲಾ ಪ್ರವಾಸ ಮಾಡಲಿದ್ದಾರೆ.
ಜೂನ್ 17 ರಂದು ಬೆಳಿಗ್ಗೆ 10 ಗಂಟೆಗೆ ಹಾಸನಕ್ಕೆ ಆಗಮಿಸುವರು, ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವ ಕುರಿತಂತೆ ಅಧಿಕಾರಿಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳೊಂದಿಗೆ 11 ಗಂಟೆಗೆ ಸಭೆ ನಡೆಸುವರು, ಕೊರೋನಾ ಸೋಂಕು ತಡೆಗಟ್ಟುವ ಕುರಿತಂತೆ 12 ಗಂಟೆಗೆ ಹಾಗೂ ಅತಿವೃಷ್ಠಿಯ ಮಳೆಯಿಂದ ಆಗಿರುವ ಬೆಳೆಹಾನಿ ಹಾಗೂ ಆಲೂಗಡ್ಡೆ ಬೆಳೆಹಾನಿ ಕುರಿತು ಮಧ್ಯಾಹ್ನ 12.45 ಕ್ಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನಂತರ ಪತ್ರಿಕಾ ಗೋಷ್ಠಿ ನಡೆಸಲಿರುವರು.
ಮದ್ಯಾಹ್ನ 3 ಗಂಟೆಗೆ ಹಾಸನದಿಂದ ಸಕಲೇಶಪುರಕ್ಕೆ ತೆರಳಿ ಎತ್ತಿನಹೊಳೆ ಕಾಮಗಾರಿ ಪರಿಶೀಲನೆ ಹಾಗೂ ಸಕಲೇಶಪುರ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುವ ಸಚಿವರು ಸಕಲೇಶಪುರದಲ್ಲಿ ವಾಸ್ತವ್ಯ ಮಾಡುವರು.
ಜೂ.18 ರಂದು ಬೆಳಿಗ್ಗೆ 10 ಗಂಟೆಗೆ ಸಚಿವರು ಸಕಲೇಶಪುರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕೊರೋನಾ ಸೋಂಕು ತಡೆಗಟ್ಟಲು ತೆಗೆದುಕೊಂಡಿರುವ ಕ್ರಮಗಳು ಹಾಗೂ ತಾಲ್ಲೂಕಿನ ಅಭಿವೃದ್ಧಿ ಕುರಿತು ಸಭೆ ನಡೆಸಿ ನಂತರ ಪತ್ರಿಕಾ ಗೋಷ್ಠಿ ನಡೆಸುವರು. ಮಧ್ಯಾಹ್ನ 12 ಗಂಟೆಗೆ ಎತ್ತಿನಹೊಳೆ ಕಾಮಗಾರಿ ಪರಿಶೀಲನೆ ನಡೆಸಿ 2 ಗಂಟೆಗೆ ಸಕಲೇಶಪುರದಿಂದ ಬೇಲೂರಿಗೆ ತೆರಳುವರು.
ಮಧ್ಯಾಹ್ನ 2.30 ಕ್ಕೆ ಬೇಲೂರು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಕೊರೋನಾ ಸೋಂಕು ತಡೆಗಟ್ಟಲು ತೆಗೆದುಕೊಂಡಿರುವ ಕ್ರಮಗಳು ಹಾಗೂ ತಾಲ್ಲೂಕಿನ ಅಭಿವೃದ್ಧಿಯ ಕುರಿತು ಸಭೆ ನಡೆಸಿ ನಂತರ ಪತ್ರಿಕಾ ಗೋಷ್ಠಿ ನಡೆಸುವರು. ಸಂಜೆ 4 ಗಂಟೆಗೆ ಎತ್ತಿನಹೊಳೆ ಕಾಮಗಾರಿ ಪರಿಶೀಲನೆ ನಡೆಸುವ ಸಚಿವರು ಸಂಜೆ 7 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.