ಹಾಸನ ತಾಪಂ ನೂತನ ಅಧ್ಯಕ್ಷರಾಗಿ ಜ್ಯೋತಿ ಅಣ್ಣಪ್ಪ ಅವಿರೋಧ ಆಯ್ಕೆ

ಹಾಸನ: ತಾಲೂಕು ಪಂಚಾಯತ್ ನೂತನ ಅಧ್ಯಕ್ಷರಾಗಿ ಗಂಡಸಿ ಕ್ಷೇತ್ರದ ಜೆಡಿಎಸ್ ಸದಸ್ಯೆ ಜ್ಯೋತಿ ಅಣ್ಣಪ್ಪ ಅವಿರೋಧವಾಗಿ ಆಯ್ಕೆಯಾದರು.


ತಾ.ಪಂ ಹಿಂದಿನ ಅಧ್ಯಕ್ಷ ನಿಂಗೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ಗುರುವಾರ ನಡೆದ ಚುನಾವಣೆಯನ್ನು ಜ್ಯೋತಿ ಅಣ್ಣಪ್ಪ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ. ನವೀನ್ಭಟ್ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷೆ  ಜ್ಯೋತಿ ಅಣ್ಣಪ್ಪ, ಜೆಡಿಎಸ್ ನಾಯಕರ ಆಶೀರ್ವಾದಿಂದ ತಾಪಂ ಅಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದೇನೆ. ತಾಲೂಕಿನಲ್ಲಿ ಬಹುಮುಖ್ಯ ಸಮಸ್ಯೆಯಾಗಿರುವ ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ಚರಂಡಿ, ರಸ್ತೆ ಕಾಮಗಾರಿಗೆ ಹಾಗೂ ರೈತರ ಬಗ್ಗೆ ಹೆಚ್ಚಿನ ಗಮನ ನೀಡಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಹೆಚ್.ಪಿ. ಸ್ವರೂಪ್ ಮಾತನಾಡಿ, ನೂತನ ಅಧ್ಯಕ್ಷರು ಸಮಾಜ ಸೇವೆ ಮೂಲಕ ಜನರಿಗೆ ಒಳ್ಳೆಯದನ್ನು ಮಾಡಬೇಕು ಎಂಬ ಉದ್ದೇಶದಿಂದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಜೆಡಿಎಸ್ಗ ರಾಜ್ಯಾಧ್ಯಕ್ಷ ಹಾಗೂ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಅವರು ಅವಕಾಶವನ್ನು ಮಾಡಿಕೊಟ್ಟಿದ್ದಾರೆ.ಅಧ್ಯಕ್ಷರು  ತಾಲೂಕಿನ ಅಭಿವೃದ್ಧಿಗೆ ಪೂರಕವಾಗಿ ಕೆಲಸ ನಿರ್ವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಹೆಚ್.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜು ಹಾಗೂ ತಾ.ಪಂ ಸದಸ್ಯರು ನೂನತನ ಅಧ್ಯಕ್ಷರಿಗೆ ಶುಭ ಹಾರೈಸಿದರು.

Post a Comment

Previous Post Next Post