ಎಣ್ಣೆ ಏಟಲ್ಲಿ ಸ್ನೇಹಿತನನ್ನೇ ಕೊಂದ


ಹಾಸನ: ಮದ್ಯದ ಮತ್ತಿನಲ್ಲಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಕೊಲೆಗೈದ ಘಟನೆ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.


ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಗ್ರಾಮದ ಪ್ರವೀಣ್ ಕೊಲೆಯಾದ ಯುವಕ. ಅದೇ ಗ್ರಾಮದ ಸಂತೋಷ್ ಹತ್ಯೆಗೈದ ಆರೋಪಿ. ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಸಂತೋಷ್ ಹಾಗೂ ಪ್ರವೀಣ್ ಗ್ರಾಮದ ಬಾರ್‍ಗೆ ಕುಡಿಯಲು ಹೋಗಿದ್ದರು. ಮದ್ಯ ಸೇವಿಸಿದ ಬಳಿಕ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಜಗಳವಾಗಿದೆ. ಈ ವೇಳೆ ಕೋಪಗೊಂಡ ಸಂತೋಷ್ ಮದ್ಯದ ಬಾಟ್ ಎತ್ತಿಕೊಂಡು ಪ್ರವೀಣ್ ತಲೆಗೆ ಹೊಡೆದಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಪ್ರವೀಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಈ ಸಂಬಂಧ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಹಿರಿಸಾವೇ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗೆ ಬಲೆ ಬೀಸಿದ್ದು, ತನಿಖೆ ಮುಂದುವರಿಸಿದ್ದಾರೆ.

Post a Comment

Previous Post Next Post