ಅರಸೀಕೆರೆ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅರಸೀಕೆರೆ ತಾಲ್ಲೂಕಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಪ್ರೇಜ್ವಲ್ ರೇವಣ್ಣ ಎಲ್ಲಾ ಇಲಾಖೆಗಳಲ್ಲಿ ಪ್ರಗತಿಯಲ್ಲಿರುವ ಯೋಜನೆಗಳು ಮತ್ತು ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಅರಸೀಕೆರೆ ಕ್ಷೇತ್ರದ ಶಾಸಕರಾದ ಶಿವಲಿಂಗೇಗೌಡ ರವರು, ಬೇಲೂರು ಕ್ಷೇತ್ರದ ಶಾಸಕರಾದ ಲಿಂಗೇಶ್ ರವರು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ(ಆಡಳಿತ) ಚಂದ್ರಶೇಖರ್ ರವರು, ತಹಶೀಲ್ದಾರ್ ಸಂತೋಷ್ ಕುಮಾರ್ ರವರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನಟರಾಜ್ ರವರು, ಡಿವೈಎಸ್ಪಿ ನಾಗೇಶ್ ರವರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Tags
ಅರಸೀಕೆರೆ