ಹಾಸನ:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವು ಕೆಎಎಸ್ ಹಾಗೂ ಇತರೆ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್ ಲೈನ್ ತರಬೇತಿ ಆಯೋಜಿಸಿದ್ದು, ನಾಡಿನ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಚಾಲನೆ ನೀಡುವರು.
ಜೂನ್ 9ರ ಮಂಗಳವಾರ ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದಲೇ ಡಿ.ರೂಪಾ ಮೌದ್ಗಿಲ್ ಅವರು
ತರಬೇತಿ ಕಾರ್ಯಕ್ರಮ ಉದ್ಘಾಟನೆ ಮಾಡಲಿರುವರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಅಧ್ಯಕ್ಷತೆ ವಹಿಸಲಿದ್ದು, ಪ್ರಾದೇಶಿಕ ಅಪರ ಆಯುಕ್ತೆ ಕೆ.ಎಂ.ಗಾಯತ್ರಿ ಮುಖ್ಯ ಅತಿಥಿಯಾಗಿ ಭಾಗಿಯಾಗುವರು. ಕುಲಸಚಿವ ಪ್ರೊ.ಲಿಂಗರಾಜಗಾಂಧಿ ಉಪಸ್ಥಿತರಿರುವರು.
2011ರಲ್ಲಿ ಆರಂಭಗೊಂಡ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಹಲವು ತರಬೇತಿಗಳನ್ನು ಆಯೋಜಿಸುತ್ತಾ ಬಂದಿದೆ. ಅದರಲ್ಲಿ ಯು.ಪಿ.ಎಸ್ಸಿ ಹಾಗೂ ಕೆ.ಪಿ.ಎಸ್ಸಿ ಪರೀಕ್ಷೆಗಳ ತರಬೇತಿಯೂ ಸೇರಿದೆ. ಕೊರೊನಾ ಕಾರಣದಿಂದ ಆನ್‍ಲೈನ್ ತರಬೇತಿಯನ್ನೂ ಆಯೋಜಿಸಲಾಗಿದ್ದು ಕೆ.ಸೆಟ್ ಪರೀಕ್ಷೆಗೆ ಕಳೆದ ವಾರ ತರಬೇತಿ ಮುಗಿದಿದೆ ಎಂದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌ ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ. ಸಂ: 0821 2515944. ಗೆ ಸಂಪರ್ಕಿಸಬಹುದಾಗಿದೆ.
Tags
ಹಾಸನ