ಹಾಸನ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ ಗೋಪಾಲಯ್ಯ ಅವರು ಇಂದು ಚನ್ನರಾಯಪಟ್ಟಣ ತಾಲ್ಲೂಕು ಕೊವಿದ್ ಆಸ್ಪತ್ರೆ ಹಾಗೂ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಹೊರ ರಾಜ್ಯದಿಂದ ಬರುವ ಎಲ್ಲರ ತಪಾಸಣೆ ಮಾಡಿ ವರದಿ ಬಂದ ನಂತರವೇ ಸೋಂಕು ಇಲ್ಲದವರನ್ನು ಮನೆಗಳಿಗೆ ಕಳಿಸಿ .ಕ್ವಾರಂಟೈನ್ ಕೇಂದ್ರದಲ್ಲಿ ಉತ್ತಮ ಮೂಲಭೂತ ಸೌಕರ್ಯ ಒದಗಿಸಿ ಎಂದು ಸಚಿವರು ಸೂಚನೆ ನೀಡಿದರು.ತಾಲ್ಲೂಕು ಕೋವಿದ್ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಗೆ ಎಲ್ಲಾ ರೀತಿಯ ಅಗತ್ಯ ಸುರಕ್ಷತಾ ಸಾಧನಗಳನ್ನು ಒದಗಿಸಿ.ಇತರ ರೋಗಿಗಳಿ ಮೊದಲಿನಂತೆ ತಪಾಸಣೆ ಮತ್ತು ಚಿಕಿತ್ಸಾ ವ್ಯವಸ್ಥೆ ಮಂದುವರೆಸಿ ಎಂದು ಸಚಿವರು ಹೇಳಿದರು. ಶಾಸಕರಾದ ಸಿ.ಎನ್.ಬಾಲಕೃಷ್ಣ, ಜಿಲ್ಲಾಧಿಕಾರಿ ಆರ್ .ಗಿರೀಶ್, ಜಿಲ್ಲಾ ಪಂಚಾಯತ್ ಸಿ.ಇ.ಒ ಪರಮೇಶ್ , ಉಪ ವಿಭಾಗಾಧಿಕಾರಿ ಡಾ ನವೀನ್ ಭಟ್, ತಹಶಿಲ್ದಾರ್ ಮಾರುತಿ ಮತ್ತಿತರರು ಹಾಜರಿದ್ದರು
Tags
ಚನ್ನರಾಯಪಟ್ಟಣ