ಟ್ವಿಟ್ಟರ್ ಖಾತೆ ತೆರೆದ ಹಾಸನ ಸಂಸದ ಪ್ರಜ್ವಲ್ ರೇವಣ್ಣ

ಹಾಸನ : ಹಾಸನ ಕ್ಷೇತ್ರದ ಸಂಸದ ಮತ್ತು ಜೆಡಿಎಸ್ ಪಕ್ಷದ ಯುವ ನಾಯಕ ಪ್ರಜ್ವಲ್ ರೇವಣ್ಣ ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಇನ್ನು ಮುಂದೆ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಜನರ ಜೊತೆ ಸಂಪರ್ಕದಲ್ಲಿ ಇರುತ್ತೇನೆ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಮೊಮ್ಮಗ, ಮಾಜಿ ಸಚಿವ ಎಚ್. ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಹಾಸನ ಕ್ಷೇತ್ರದ ಸಂಸದರು. 2019ರ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ಮೊಮ್ಮಗನಿಗಾಗಿ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು.

ಫೇಸ್ ಬುಕ್‌ ಪುಟದಲ್ಲಿ ಸಕ್ರಿಯರಾಗಿರುವ ಪ್ರಜ್ವಲ್ ರೇವಣ್ಣ ಇನ್ನು ಮುಂದೆ ಟ್ವಿಟರ್‌ನಲ್ಲಿಯೂ ಸಕ್ರಿಯರಾಗಲಿದ್ದಾರೆ. ಈ ಕುರಿತು ಅವರು ಬುಧವಾರ ಟ್ವೀಟ್ ಮಾಡಿದ್ದಾರೆ. #iPrajwalRevanna ಮುಖಾಂತರ ಸಂಪರ್ಕದಲ್ಲಿರುತ್ತೇನೆ ಎಂದು ಅವರು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟ್ವಿಟರ್‌ನಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಘೋಷಣೆ ಮಾಡಿದ್ದರು. ಈಗ ಪ್ರಜ್ವಲ್ ರೇವಣ್ಣ ಸಹ ಟ್ವಿಟರ್‌ಗೆ ಬಂದಿದ್ದಾರೆ. ಪ್ರಸ್ತುತ ವಿದ್ಯಾಮಾನಗಳ ಕುರಿತು ಟ್ವೀಟ್‌ಗಳನ್ನು ಮಾಡಲಿದ್ದಾರೆ.

Post a Comment

Previous Post Next Post