ಅರಸೀಕೆರೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನ ಬಂಧನ

ದಿನಾಂಕ: 11-06-2020 ರಂದು ಮಧ್ಯಾಹ್ನ 03-00 ಗಂಟೆ ಸಮಯದಲ್ಲಿ ಅರಸೀಕೆರೆ ತಾಲ್ಲೂಕು, ಕಸಬಾ ಹೋಬಳಿ, ಅರಸೀಕೆರೆ-ತಿಪಟೂರು ರಸ್ತೆಯಲ್ಲಿರುವ ಬೆಳಗುಂಬ ಗೇಟ್ ಹತ್ತಿರ ಒಬ್ಬ ಆಸಾಮಿಯು ಮೂರು ಪ್ಲಾಸ್ಟಿಕ್ ಚೀಲದಲ್ಲಿ ಅಕ್ರಮವಾಗಿ ಮದ್ಯವನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾರೆಂದು ಪಿಎಸ್‍ಐ ಶ್ರೀ ಬಸವರಾಜ ಎಸ್. ಉಪ್ಪಾಲದಿನ್ನಿ ಅರಸೀಕೆರೆ ಗ್ರಾಮಾಂತರ ಠಾಣೆ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವನ ಹಿಡಿದು ಹೆಸರು ವಿಳಾಸ ಕೇಳಲಾಗಿ ಸುರೇಶ ಬಿನ್ ಶಿವನಂಜಪ್ಪ, ಬೆಳಗುಂಬ ಗ್ರಾಮ, ಕಸಬಾ ಹೋಬಳಿ, ಅರಸೀಕೆರೆ ತಾಲ್ಲೂಕು ಎಂದು ತಿಳಿಸಿದವನನ್ನು ದಸ್ತಗಿರಿ ಮಾಡಿಕೊಂಡು ಆತನ ವಶದಲ್ಲಿದ್ದ 27,148/- ಬೆಲೆಯ ಮದ್ಯವನ್ನು ಅಮಾನತ್ತುಪಡಿಸಿಕೊಂಡು ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ

Post a Comment

Previous Post Next Post