ತೋಟಗಾರಿಕೆ ಇಲಾಖೆ: ರೈತಪರ ಯೋಜನೆಗಳ ಅನುಷ್ಠಾನ

ಹಾಸನ: ತೋಟಗಾರಿಕೆ ಇಲಾಖೆಯಲ್ಲಿ ಅನೇಕ ರೈತಪರ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಅದರಲ್ಲಿ ಪ್ರಮುಖವಾಗಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಒಉಓಖಇಉಂ), ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ (ಒIಆಊ – ಓಊಒ), ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (PಒಏSಙ) ಹಾಗೂ ಇನ್ನಿತರೆ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರದವತಿಯಿಂದ ಕೋವಿಡ್-19 ಲಾಕ್‍ಡೌನ್ ಅವಧಿಯಲ್ಲಿ ನಷ್ಟಕೊಳಗಾದ ಹೂ, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಪರಿಹಾರಧನ ವಿತರಿಸಲಾಗುತ್ತಿದೆ. 
ಈ ಎಲ್ಲಾ ಯೋಜನೆಗಳ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕುಗಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮತ್ತು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.

  ಇಲಾಖೆವತಿಯಿಂದ ಅನುಷ್ಟಾಗೊಳಿಸುತ್ತಿರುವ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ                ಯೋಗೇಶ್. ಹೆಚ್.ಆರ್., ತೋಟಗಾರಿಕೆ ಉಪನಿರ್ದೇಶಕರು (ಜಿಪಂ), ಹಾಸನ ರವರನ್ನು ಸಂಪರ್ಕಿಸಲು ಕೋರಿದೆ.  ದೂರವಾಣಿ ಸಂಖ್ಯೆ : 08172-268387, ಮೊಬೈಲ್ ಸಂಖ್ಯೆ : 9448999223.

Post a Comment

Previous Post Next Post