ನಟಿ ಸುಧಾರಾಣಿ ಅಣ್ಣನ ಮಗಳಿಗೆ ಚಿಕಿತ್ಸೆ ವಿಳಂಬ ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮ

ನಟಿ ಸುಧಾರಾಣಿ ಅಣ್ಣನ ಮಗಳಿಗೆ ಚಿಕಿತ್ಸೆ ನೀಡಲು ವಿಳಂಬ ಮಾಡಿದ ಖಾಸಗಿ ಆಸ್ಪತ್ರೆ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, ನಟಿ ಸುಧಾರಾಣಿ ಅರೋಗ್ಯ ಸಮಸ್ಯೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ಬಂದರೂ ಚಿಕಿತ್ಸೆಗೆ ತಡಮಾಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ. ಅವರಷ್ಟೇ ಅಲ್ಲ ಸಾಮಾನ್ಯ ವ್ಯಕ್ತಿ ಯಾರೇ ಆಗಲಿ ಚಿಕಿತ್ಸೆ ಸಿಗದೇ ಪರದಾಡಬಾರದು. ಆ ಖಾಸಗಿ ಆಸ್ಪತ್ರೆಯ ವಿರುದ್ಧ ಶಿಸ್ತು ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.

ಸುಧಾರಾಣಿ ಅವರ ಅಣ್ಣನ ಮಗಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಹಾಗಾಗಿ ತಡರಾತ್ರಿ ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ . ಆದ್ರೆ , ನಗರ ಖಾಸಗಿ ಆಸ್ಪತ್ರೆಯ ಬಳಿ ತೆರಳಿದ್ರೆ , ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುವುದಿರ್ಲಿ , ಆಸ್ಪತ್ರೆಯ ಒಳಗೂ ಪ್ರವೇಶಿಸಲು ಅನುಮತಿ ನೀಡಿಲ್ಲ . ಇದರಿಂದ ಕಂಗಾಲಾದ ನಟಿ , ವೈದ್ಯರಿಂದ ರೋಸಿ ಹೋಗಿದ್ದಾರೆ . ಕೊನೆಗೆ ದಾರಿ ಕಾಣದೇ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ‍ ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ . ಅದ್ರಂತೆ , ಕಮೀಷನರ್ ಮಾತನಾಡುತ್ತಿದ್ದಂತೆ ಎಚ್ಚೆತ್ತುಕೊಂಡ ವೈದ್ಯರು ಚಿಕಿತ್ಸೆ ನೀಡಿದ್ದಾರೆ .

Post a Comment

Previous Post Next Post