ಆಲೂರು : ಆಲೂರು ತಾಲೂಕಿನ ಪಾಳ್ಯ ಹೋಬಳಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನರ್ಸ್ಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಆರೋಗ್ಯ ಕೇಂದ್ರವನ್ನು ಎರಡು ದಿನಗಳವರೆಗೆ ಸೀಲ್ ಡೌನ್ ಮಾಡಲಾಗಿದೆ ಎಂದು ತಹಸೀಲ್ದಾರ್ ಶಿರೀನ್ ತಾಜ್ ತಿಳಿಸಿದ್ದಾರೆ.
ಹೋಬಳಿ ಸಾರ್ವಜನಿಕರಿಗೆ ತೊಂದರೆಯಾಗದAತೆ ತುರ್ತು ಚಿಕಿತ್ಸೆಗೆಂದು ಓರ್ವ ಸಿಬ್ಬಂದಿಯನ್ನು ನಿಯೋಜಿಸುವಂತೆ ಈಗಾಗಲೇ ಸ್ಥಳಿಯ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಸೋಂಕು ದೃಢಪಟ್ಟವರು ಆಲೂರು ಪಟ್ಟಣದ ರೈತ ಸಂಪರ್ಕ ಕೇಂದ್ರದ ಬಳಿ ವಾಸವಿದ್ದರು ಹಾಗಾಗಿ ಅವರ ಮನೆಯನ್ನು ಸಹಾ ಸೀಲ್ ಡೌನ್ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಪಾಳ್ಯ ಗ್ರಾಮ ಪಂಚಾಯಿತಿ ವತಿಯಿಂದ ಆರೋಗ್ಯ ಕೇಂದ್ರದ ಆವರಣಕ್ಕೆ ಔಷಧಿ ಸಿಂಪಡಿಸಲಾಗಿದೆ.
Tags
ಆಲೂರು