ಇದೇ ವೇಳೆ ಎಸ್.ಡಿ.ಎಂ. ಕಾಲೆಜಿನ ಕೋವಿಡ್ ಕೇರ್ ಕೇಂದ್ರಕ್ಕೆ ಜಿಲ್ಲಾಧಿಕಾರಿಯವರು ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆ ಪರಿಶೀಲಿಸಿ ಸಿ.ಇ.ಟಿ. ಪರೀಕ್ಷೆ ಬರೆಯುತ್ತಿರುವ 3 ಸೋಂಕಿತ ವಿದ್ಯಾರ್ಥಿಗಳಿಗೆ ಒದಗಿಸಿರುವ ವ್ಯವಸ್ಥೆ ಮತ್ತು ಮೇಲ್ವಿಚಾರಣೆ ಕುರಿತು ಪರಿಶೀಲಿಸಿದರು. ಕೋವಿಡ್ ಕೇರ್ ಕೇಂದ್ರದ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಆತ್ಮ ಸ್ಥೈರ್ಯ ತುಂಬುವಂತೆ ಹಾಗೂ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀನಿವಾಸ ಮೂರ್ತಿ ಹಾಗೂ ಕೋವಿಡ್ ಕೇಂದ್ರದ ಸಿಬ್ಬಂದಿಗಳು ಹಾಜರಿದ್ದರು.
Tags
ಹಾಸನ