ಹಾಸನ: ಕೋವಿಡ್ – 19 ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರು, ಕೂಲಿಕಾರರು ಮತ್ತು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು, ಕೆಪಿಆರ್ಎಸ್ ಮತ್ತು ದಲಿತ ಹಕ್ಕುಗಳ ಸಮಿತಿ ಮನವಿ.
ದೇಶದಾದ್ಯಂತ ಜನರು ಒಂದು ಕಡೆ ಆಳಗೊಳ್ಳುತ್ತಿರುವ ಆರ್ಥಿಕ ಬಿಕ್ಕಟ್ಟು ಮತ್ತು ಇನ್ನೊಂದೆಡೆ ಕೋವಿಡ್-19ರ ಸಂಕಷ್ಠವನ್ನು ಅತ್ಯಂತ ಗಂಭೀರವಾಗಿ ಎದುರಿಸುತ್ತಿರುವಾಗ, ಭಾರತ ಸÀರ್ಕಾರ ಜನಗಳ ಜೊತೆ ನಿಂತು ಜನತೆಯ ಹಾಗೂ ದೇಶದ ಆರ್ಥಿಕ ಸಂಕಷ್ಠ ಹಾಗೂ ಆರೋಗ್ಯ ರಕ್ಷಣಗೆ ತೊಡಗಬೇಕಾದ ಸಂದರ್ಭದಲ್ಲಿ ಅವುಗಳನ್ನು ಪರಿಣಾಮಕಾರಿಯಾಗಿ ಎದುರಿಸಿ ಜನತೆಗೆ ನೆರವಾಗುವ ಬದಲು, ಜನತೆಯನ್ನು ಆರೋಗ್ಯ ಹಾಗೂ ಆರ್ಥಿಕ ಸಂಕಷ್ಠದಲ್ಲಿಯೇ ಬಿಟ್ಟು, ಕಾಪೆರ್Çೀರೇಟ್ ಕಂಪನಿಗಳ ಲೂಟಿಗೆ ದೇಶವನ್ನು ತೆರೆಯುವ ದೇಶ ಹಾಗೂ ಜನ ವಿರೋಧಿ ನೀತಿಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ ಮತ್ತು ಅಂತಹ ನೀತಿಗಳನ್ನು ತಕ್ಷಣವೇ ಕೈಬಿಡುವಂತೆ ಈ ಮೂಲಕ ಮತ್ತೊಮ್ಮೆ ಒತ್ತಾಯಿಸುತ್ತಿದ್ದೇವೆ.
ಜನತೆ ಹಾಗೂ ದೇಶವನ್ನು ಕೋವಿಡ್-19 ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು, ಕೆಳಕಂಡ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಬಲವಾಗಿ ಒತ್ತಾಯಿಸುತ್ತೇವೆ. ಅದಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಮತ್ತು ಜನದ್ರೋಹಿ ತಿದ್ದುಪಡಿ ಕಾಯ್ದೆಗಳನ್ನು ಹಾಗೂ ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ಸಂಸ್ಥೆಗಳ ಖಾಸಗೀಕರಣವನ್ನು ತಡೆಯಬೇಕೆಂದು ಅಗ್ರಹಿಸುವೆವು.
ಹಕ್ಕೊತ್ತಾಯಗಳು:
1. ಕೋವಿಡ್ - 19 ವೈರಾಣುವನ್ನು ಪರಿಣಾಮಕಾರಿಯಾಗಿ ಎದುರಿಸಲು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ನಾಗರಿಕರಿಗೆ ಉಚಿತ ಹಾಗೂ ಸುರಕ್ಷತಾ ಚಿಕಿತ್ಸೆ ದೊರೆಯುವಂತೆ ಕ್ರಮವಹಿಸಬೇಕು. ಇದಕ್ಕಾಗಿ ದೇಶದ ಒಟ್ಟು ಆಂತರಿಕ ಉತ್ಪಾದನೆಯ ಶೇ. 3 ರಷ್ಠು ಅಂಶವನ್ನು ವೆಚ್ಚ ಮಾಡಲು ಕ್ರಮವಹಿಸಬೇಕು.
2. ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ದೇಶದ ಎಲ್ಲಾ ಕುಟುಂಬಗಳಿಗೆ ಕನಿಷ್ಟ ಕೋವಿಡ್ - 19 ಸಮಸ್ಯೆ ಇತ್ಯರ್ಥವಾಗುವವರೆಗೆ ಮಾಸಿಕ 7,500 ರೂಗಳ ನೆರವು ಘೋಷಿಸಬೇಕು.
3. ಈ ಎಲ್ಲಾ ಕುಟುಂಬಗಳ ಸದಸ್ಯರಿಗೆ, ಮಾಸಿಕ ತಲಾ 10 ಕೆಜಿ ಸಮಗ್ರ ಆಹಾರ ಸಾಮಗ್ರಿಗಳನ್ನು ಉಚಿತವಾಗಿ ಒದಗಿಸಬೇಕು ಹಾಗೂ ಆರೋಗ್ಯ ಸುರಕ್ಷತಾ ಸಾಮಗ್ರಿಗಳ ಕಿಟ್‍ನ್ನು ಒದಗಿಸಬೇಕು.
4. ನಗರ ಹಾಗೂ ಗ್ರಾಮೀಣ ಪ್ರದೇಶದ ಉದ್ಯೋಗ ಕೇಳುವ ಎಲ್ಲಾ ಜನತೆಗೆ ಉದ್ಯೋಗ ಖಾತ್ರಿ ಯೋಜನೆಯಡಿ ತಲಾ ಕುಟುಂಬಕ್ಕೆ ಕನಿಷ್ಠ 200 ದಿನಗಳ ಉದ್ಯೋಗ ನೀಡಬೇಕು. ಕೂಲಿ ಹಣವನ್ನು ಕನಿಷ್ಟ 600 ರೂಗಳಿಗೆ ಹೆಚ್ಚಿಸಬೇಕು.
5. ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ 10,000 ರೂಗಳನ್ನು ಒದಗಿಸಬೇಕು.
6. ಎಲ್ಲ ರೀತಿಯ ಕಾರ್ಮಿಕರುಗಳಿಗೆ ಲಾಕ್‍ಡೌನ್ ಅವಧಿಯ ವೇತನವು ದೊರೆಯುವಂತೆ ಅಗತ್ಯ ಕ್ರಮವಹಿಸಬೇಕು. ಕಾರ್ಮಿಕ ಕಾಯ್ದೆಗಳ ದುರ್ಬಲಗೊಳಿಸುವಿಕೆಯನ್ನು ತಕ್ಷಣ ತಡೆಯಬೇಕು.
7. ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ವಲಯದ ಸಂಸ್ಥೆಗಳ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು.
8. ವ್ಯವಸಾಯವನ್ನು ಕಾಪೆರ್Çೀರೇಟ್ ಕಂಪನಿಗಳಿಗೆ ವಹಿಸುವ ಎಲ್ಲಾ ಭೂ ಹಾಗೂ ವ್ಯವಸಾಯ ಸಂಬಂಧಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು.
9. ಸಾರ್ವಜನಿಕರನ್ನು ಕಾಳಸಂತೆಯ ಲೂಟಿಕೋರತನಕ್ಕೆ ಒಳಪಡಿಸುವ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ 2020ನ್ನು ವಾಪಾಸು ಪಡೆಯಬೇಕು.
Tags
ಹಾಸನ