ಜೆಡಿಎಸ್ ರಾಜ್ಯಾಧ್ಯಕ್ಷರ ಪತ್ನಿಗೂ ಕೊರೋನಾ.



ಸಕಲೇಶಪುರ :   ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿಯವರ ಪತ್ನಿ ಜಿಲ್ಲಾ ಪಂಚಾಯಿತಿ ಸದಸ್ಯೆ  ಚಂಚಲಾ ಕುಮಾರಸ್ವಾಮಿರವರಿಗೆ ಕೊರೊನಾ ಪಾಸಿಟಿವ್ ಧೃಡ.
    ಕಳೆದವಾರ ಆಲೂರಿನಲ್ಲಿ ಶಾಸಕರು ಹಾಗೂ ಅವರ ಆಪ್ತ ಸಹಾಯಕ,  ಗನ್ ಮ್ಯಾನ್ ಸೇರಿದಂತೆ ಒಟ್ಟು 11 ಜನರ ಗಂಟಲು ದ್ರವ ತೆಗೆದು‌ ಹಾಸನದ ಟೆಸ್ಟಿಂಗ್ ಕೇಂದ್ರಕ್ಕೆ ರವಾನೆ.. ಬೆಳಗೋಡು ಜಿಲ್ಲಾ ಪಂಚಾಯತಿ ಕ್ಷೇತ್ರದ ಸದಸ್ಯೆ ಚಂಚಲ ಕುಮಾರಸ್ವಾಮಿ, ಅವರ ಮಗಳು ಹಾಗೂ ಕಾರಿನ ಡ್ರೈವರ್ ಗೆ ಪಾಸಿಟಿವ್ ವರದಿ.
 ಸದ್ಯ ಜಿಲ್ಲಾ ಪಂಚಾಯತಿ ಸದಸ್ಯರು ಮಂಡ್ಯ ಜಿಲ್ಲೆಯ ತಮ್ಮ ಮಗಳ ಮನೆಯಲ್ಲಿ ಚಿಕಿತ್ಸೆ. 
ಕಾರಿನ ಚಾಲಕ ಹಾಸನ ಜಿಲ್ಲಾ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ದಾಖಲು. 
ಸದಸ್ಯೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಶಾಸಕರು ಸೇರಿದಂತೆ ಅವರ ಎಲ್ಲ ಸಿಬ್ಬಂದಿ ವರ್ಗದವರು ಪ್ರತ್ಯೇಕವಾದ ಮನೆಯಲ್ಲಿ  ಕ್ವಾರಂಟೈನ್.
ಶಾಸಕ ಎಚ್.ಕೆ ಕುಮಾರಸ್ವಾಮಿ ಮಾತನಾಡಿ  ಮೊದಲ ವರದಿಯಲ್ಲಿ  ನನಗೆ ಪಾಸಿಟಿವ್ ಕಂಡು ಬಂದಿಲ್ಲ . 
ಮುನ್ನೆಚ್ಚರಿಕೆ ಯಾಗಿ ಬೇರೆ ಮನೆಗೆ ಸ್ಥಳಂತಾರ. 
ಒಂದು ವಾರ ಸಾರ್ವಜನಿಕ ಸಂಪರ್ಕದಿಂದ ದೂರವಿದ್ದು ಹೋಂ ಕ್ವಾರಂಟೈನ್ ನಲ್ಲಿ ಇರಲು ತೀರ್ಮಾನ. 
ಸಾರ್ವಜನಿಕರು ಪಕ್ಷದ ಕಾರ್ಯಕರ್ತರು ಅಗತ್ಯವಿದ್ದಲ್ಲಿ ದೂರವಾಣಿ ಮೂಲಕ ಸಂಪರ್ಕಿಸಲು ಮನವಿ.

Post a Comment

Previous Post Next Post