ಸಚಿವರಿಂದ ಹಿಮತ್‍ಸಿಂಕಾ ಕೈಗಾರಿಕೆಗೆ ಭೇಟಿ


ಹಾಸನ,ಜು.2:- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಜಗದೀಶ್ ಶೆಟ್ಟರ್ ಅವರು ಇಂದು ಹಾಸನ ನಗರದಹೊರವಲಯದಲ್ಲಿರುವ ಹಿಮತ್ ಸಿಂಕಾ ಕೈಗಾರಿಕೆಗೆ ಭೇಟಿ ನೀಡಿ ಪರಿಶೀಲಿಸಿದರು.

ಅಲ್ಲಿ ಉತ್ಪಾದನೆಯಾಗುವ ಅಂತರಾಷ್ಟ್ರೀಯ ಬ್ರಾಂಡ್ ಗಳ ಟವೆಲ್ ,ಬೆಡ್ ಶೀಟ್ ಗಳನ್ನು ಸಚಿವರು ಪರಿಶೀಲಿಸಿದರಲ್ಲದೆ ಕೈಗಾರಿಕೆಯಲ್ಲಿ ಉತ್ಪಾದನಾ ಪ್ರಕ್ರಿಯೆಯನ್ನು ಸಹ ಅವರು ಪರಿಶೀಲಿಸಿ ಮಾಹಿತಿ ಪಡೆದರು.

ಶಾಸಕರಾದ ಪ್ರೀತಂ  ಜೆ ಗೌಡ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಕರ್ನಾಟಕ ಕೈಗಾರಿಕಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿವಶಂಕರ್, ಜಿಲ್ಲಾಧಿಕಾರಿ ಅರ್.ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ   ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Post a Comment

Previous Post Next Post