ಪಿಯುಸಿ ಯಲ್ಲಿ ಅನುತ್ತೀರ್ಣ : ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.

 ಅರಕಲಗೂಡು :  ಮಂಗಳವಾರ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಮಲ್ಲಿಪಟ್ಟಣ ಹೋಬಳಿ ಕೋಠಿ ದಾಸಯ್ಯನಕೊಪ್ಪಲುವಿನ ಭೂಮಿಕ (18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ವಿದ್ಯಾರ್ಥಿನಿ. 
ಭೂಮಿಕ ಹಾಸನದ ವಿಭಜಿತ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡಿದ್ದಳು. ಮಂಗಳವಾರ ಪ್ರಕಟವಾದ ಫಲಿತಾಂಶದಲ್ಲಿ ಭೂಮಿಕಾ ಅನುತ್ತೀರ್ಣಳಾಗಿದ್ದಾರೆ.  ಇದರಿಂದ ಮನನೊಂದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Post a Comment

Previous Post Next Post