ವೇತನ-ಉದ್ಯೋಗ ಭದ್ರತೆ ನೀಡಲು ಆಗ್ರಹಿಸಿ ಅತಿಥಿ ಉಪನ್ಯಾಸಕರ ಮನವಿ

ಹಾಸನ: ಲಾಕ್ ಡೌನ್ ಅವಧಿಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಕರ್ತವ್ಯದ ಅವಧಿ ಎಂದು ಪರಿಗಣಿಸಿ ವೇತನ ಮತ್ತು ಉದ್ಯೋಗ ಭದ್ರತೆ ನೀಡುವಂತೆ ಆಗ್ರಹಿಸಿ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಕರುಗಳ ರಾಜ್ಯ ಸಮನ್ವಯ ಸಮಿತಿಯಿಂದ ಜಿಲ್ಲಾಧಿಕಾರಿ ಆರ್. ಗಿರೀಶ್ ರವರಿಗೆ ಮನವಿ ಸಲ್ಲಿಸಲಾಯಿತು.
      ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ ಅತಿಥಿ ಉಪನ್ಯಾಸಕರುಗಳಿಗೆ ಹರಿಯಾಣ ಇಲ್ಲವೇ ಪಶ್ಚಿಮ ಬಂಗಾಳ ಸರಕಾರಗಳ ಮಾಧರಿಯಲ್ಲಿ ವೇತನ ಮತ್ತು ಉದ್ಯೋಗದ ಭದ್ರತೆ ನೀಡಬೇಕು ಎಂದರು. ನೇಮಕಾತಿ ಸ್ಥಗಿತಗೊಳಿಸಿ ಅತಿಥಿ ಉಪನ್ಯಾಸಕರುಗಳನ್ನು ಪಶ್ಚಿಮ ಬಂಗಾಳ ಇಲ್ಲವೇ ಹರಿಯಾಣ ಮಾಧರಿಯಲ್ಲಿ ಖಾಯಂ ಮಾಡಿಬೇಕು. ಲಾಕ್ ಡೌನ್ ವೇಳೆ ಪೂರ್ಣ ವೇತನ ನೀಡಬೇಕು ಮತ್ತು ಆತ್ಮಹತ್ಯೆ ಒಳಗಾದವರಿಗೆ 10 ಲಕ್ಷ ರೂ ಪರಿಹಾರ ನೀಡಿ ವೈದ್ಯಕೀಯ ಸೌಲಭ್ಯ ಮತ್ತು ಇತರೆ ಸರಕಾರಿ ಸೌಲಭ್ಯಗಳನ್ನು ಒದಗಿಸುವಂತೆ ತಮ್ಮ ಬೇಡಿಕೆಗಳನ್ನು ಸರಕಾರದ ಮುಂದೆ ಇಟ್ಟರು.
      ಇದೆ ವೇಳೆ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಕರುಗಳ ರಾಜ್ಯ ಸಮನ್ವಯ ಸಮಿತಿಯ ಅಧ್ಯಕ್ಷ ಕೆ.ಎನ್. ಯತೀಶ್, ಗೌರವಾಧ್ಯಕ್ಷ ಸಿ. ಶಿವಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಎಸ್. ಆನಂದ ಕುಮಾರ್ ಇತರರು ಪಾಲ್ಗೊಂಡಿದ್ದರು.

Post a Comment

Previous Post Next Post