ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕ ವಾತಾವರಣ ಸೃಷ್ಟಿ: ಜಗದೀಶ್ ಶೆಟ್ಟರ್

  
ಹಾಸನ,ಜು.2:- ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ದಿಗೆ ಎಲ್ಲಾ ರೀತಿಯ ಪೂರಕ ವಾತಾವರಣ ಸೃಷ್ಟಿ ಮಾಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಜಗದೀಶ್ ಶೆಟ್ಟರ್ ಅವರು ತಿಳಿಸಿದ್ದಾರೆ.
ಹಾಸನದಲ್ಲಿ ಸುದ್ದಿ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ ದೃಷ್ಟಿಯಿಂದ ತಾವು ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ, ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸುತ್ತಿರುವುದಾಗಿ ತಿಳಿಸಿದರು.

ಕೈಗಾರಿಕೆಗಳನ್ನು ಬಲ ಪಡಿಸುವ ಸಲುವಾಗಿ ಭೂ ಸುಧಾರಣಾ ಕಾಯಿದೆಗೆ ತಿದ್ದು ಪಡಿ ತರಲಾಗಿದ್ದು ನಿಯಮ 79 ಎ ಮತ್ತು 79 ಬಿ ಯನ್ನು ರದ್ದು ಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಅದೇ ರೀತಿ ಕೈಗಾರಿಕೆಗಳ ಸೌಕರ್ಯ ಅಭಿವೃದ್ಧಿ ಕಾಯಿದೆ  ತಿದ್ದುಪಡಿ ಗೂ  ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಚಿವರು ಹೇಳಿದರು .

ಭೂ ಸುದಾರಣಾ ಕಾಯಿದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ. ನೆರೆಯ ಅಂಧ್ರ ಪ್ರದೇಶ, ತೆಲಂಗಾಣ ತಮಿಳುನಾಡು ಹಾಗೂ ಕೇರಳಗಳಲ್ಲೂ ಈ ನಿಯಮ ಅನುಸರಿಸುತ್ತಿಲ್ಲ  ಈ ಕಾಯಿದೆಯಿಂದಾಗಿ.ಈ ಹಿಂದಿನ ಕಾಯಿದೆಯಿಂದ  ಯಾವುದೇ ಜಮೀನನ್ನು ವಶಪಡಿಸಿಕೊಳ್ಳಲೂ ಅಗಿಲ್ಲ .ಹಾಗಾಗಿ ತಿದ್ದುಪಡಿ ಜಾರಿಗೆ ತರಲಾಗಿದೆ. ಇದರಿಂದ ಕೈಗಾರಿಕೆಗಳ ಅಭಿವೃದ್ದಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಚಿವರು  ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯದಲ್ಲಿ  ಬಂಡವಾಳ  ಹೂಡಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ. ವಿದೇಶಿ ಪ್ರತಿನಿಧಿಗಳನ್ನು ಇದರಲ್ಲಿ ಸೇರ್ಪಡೆ ಮಾಡಲಾಗಿದೆ. ದೊಡ್ಡ ದೊಡ್ಡ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದ್ದು, ಹೂಡಿಕೆಗೆ ಅಹ್ವಾನಿಸಲಾಗುತ್ತಿದೆ. ರಿಯಾಯಿತಿ ಹಾಗೂ ಪ್ರೋತ್ಸಾಹ ಗಳನ್ನು ನೀಡಲಾಗುತ್ತಿದೆ ಎಂದು ಸಚಿವರಾದ ಜಗದೀಶ್ ಶೆಟ್ಟರ್ ತಿಳಿಸಿದರು.

Post a Comment

Previous Post Next Post