ಅರಕಲಗೂಡು: ಶರವೇಗದಲ್ಲಿ ಸಮುದಾಯಕ್ಕೆ ಹಬ್ಬುತ್ತಿರುವ ಮಹಾಮಾರಿ ಕರೊನಾ ಸೋಂಕು ತಡೆಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು, ಮುಖ್ಯವಾಗಿ ಕರೊನಾ ವಾರಿಯರ್ಸ್ ಗಳು ಮತ್ತಷ್ಟು ಜಾಗೃತರಾಗಬೇಕು ಎಂದು ಮಾಜಿ ಸಚಿವ ಎ. ಮಂಜು ಮನವಿ ಮಾಡಿದರು.
ಅರಕಲಗೂಡು ಪಟಣ್ಣ ಸಮೀಪದ ಡಿ.ಕೆ.ಕನ್ವೆನ್ಷನ್ ಹಾಲ್ ನಲ್ಲಿ ಮಂಜು ಅಭಿಮಾನಿ ಬಳಗದ ವತಿಯಿಂದ ಅರಕಲಗೂಡು ಕಸಬಾ ಹೋಬಳಿ ಕರೊನಾ ವಾರಿಯರ್ಸ್ ಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಮಹಾಮಾರಿ ಕರೊನಾ ಸೋಂಕು ಇದೀಗ ಸಮುದಾಯಕ್ಕೆ ಹಬ್ಬುತ್ತಿದ್ದು ಅಮಾಯಕರ ಬದುಕನ್ನು ಕತ್ತಲೆಯ ಕೂಪಕ್ಕೆ ದೂಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ, ಹಾಗಾಗಿ ಕರೊನಾ ವಾರಿಯರ್ಸ್ ಗಳು ಹೆಚ್ಚು ಜಾಗೃತರಾಗಿ ಸಮುದಾಯಕ್ಕೆ ಸೋಂಕು ತಗುಲದಂತೆ ನಿಗಾ ವಹಿಸಿ ಕರ್ತವ್ಯ ನಿರ್ವಹಿಸುವುದು ಅತ್ಯವಶ್ಯಕ. ಎಲ್ಲಕ್ಕಿಂತ ಮುಖ್ಯವಾಗಿ ಮದ್ದಿಲ್ಲದ ಕರೊನಾ ಕಾಯಿಲೆಗೆ ಸಾರ್ವಜನಿಕರೇ ಸ್ವಯಂಪ್ರೇರಿತರಾಗಿ ಪರಸ್ಪರ ಅಂತರ ಕಾಪಾಡಿಕೊಂಡು ಪರಿಹಾರ ಮಾರ್ಗಗಳನ್ನು ಪಾಲಿಸಬೇಕು ಎಂದು ವಿನಂತಿಸಿದರು.
ಕೋವಿಡ್ - ೧೯ ಯೋಧರಾಗಿ ಜೀವದ ಹಂಗು ತೊರೆದು ಕೆಲಸ ನಿರ್ವಹಿಸುತ್ತಿರುವ ಕರೊನಾ ಸೇನಾನಿಗಳು ಹೊರಗಿನಿಂದ ಬರುವವರ ಬಗ್ಗೆಯೂ ಸದಾ ನಿಗಾ ಇಡಬೇಕು, ಸಾರ್ವಜನಿಕರೂ ಹೆಚ್ಚು ಸಹಕಾರ ನೀಡಬೇಕು, ಇದರಿಂದ ಸೋಂಕು ತಕ್ಕಮಟ್ಟಿಗೆ ಹಳ್ಳಿಗಳಿಗೆ ವ್ಯಾಪಿಸುವುದನ್ನು ತಡೆಯಲು ನೆರವಾಗಲಿದೆ. ಕುಟುಂಬದವರ ರಕ್ಷಣೆಯನ್ನು ಲೆಕ್ಕಿಸದೆ ಕರೊನಾ ವಿರುದ್ದ ಹೋರಾಡುತ್ತಿರುವ ವಾರಿಯರ್ಸ್ ಗಳನ್ನು ಸನ್ಮಾನಿಸುತ್ತಿರುವುದು ಅತೀವ ಸಂತಸ ತಂದಿದೆ ಎಂದರು.
ಪೋಲಿಸ್ಇಲಾಖೆ ,ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಹಲವಾರು ಕರೊನಾ ಸೇನಾನಿಗಳಿಗೆ ಹೂಮಳೆಗರೆದು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.
ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಮಂಜುನಾಥ್, ರಾಮನಾಥಪುರ ಕ್ಷೇತ್ರದ ಜಿಪಂ ಸದಸ್ಯ ಡಾ.ಮಂಥರ್ ಗೌಡ, ತಾಪಂ ಸದಸ್ಯ ಪುಟ್ಟರಾಜು, ಸವಿತ ರಾಮು,ಮುಖಂಡರಾದ ಕೆ.ಅರ್ ಹೊಯ್ಸಳ, ಎ.ಎಂ. ರಘು, ರವಿಕುಮಾರ್ ( ವಕಾರೆ), ಬಾಣದಹಳ್ಳಿ ಗಣೇಶ್, ಮಧು, , ಜಬೀಉಲ್ಲಾ , ಉದೇಶ್, ಕೆ.ಆರ್. ಮುಂತಾದವರು ಹಾಜರಿದ್ದು ಸಹಕರಿಸಿದರು.
Tags
ಅರಕಲಗೂಡು