ಹಾಸನ ಜಿಲ್ಲೆಯಲ್ಲಿ ಇಂದು ಹೊಸದಾಗಿ 136 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ ಇಂದು 6 ಸಾವು ಸಂಭವಿಸಿದೆ ಅದರೊಂದಿಗೆ ಸೋಂಕಿತರ ಸಂಖ್ಯೆ 3294 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ತಿಳಿಸಿದ್ದಾರೆ.
ಇದುವರೆಗೆ 1247 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 1953 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಒಟ್ಟು 94 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದರು. ಕೋವಿಡ್-19 ಉಲ್ಬಣವಾಗುತ್ತಿರುವ ಹನ್ನಲೆಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕರೋನಾ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ಡಾ|| ಸತೀಶ್ ಹೇಳಿದರು.
Tags
ಹಾಸನ