ಆ.14 ರಂದು ಹಾಸನದಲ್ಲಿ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ

ರೈತ-ಕಾರ್ಮಿಕ ಹಿತಕ್ಕೆ ದಕ್ಕೆ ತರುವ ತಿದ್ದುಪಡಿ ವಾಪಸ್ ಗೆ ಆಗ್ರಹಿಸಿ

ಹಾಸನ: ರೈತ ಮತ್ತು ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಲು ಒತ್ತಾಯಿಸಿ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಆಗಸ್ಟ್ 14ರ ಶುಕ್ರವಾರ ಮದ್ಯಾಹ್ನ 12 ಗಂಟೆಗೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದರು.
       ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಗತಿಪರ-ರೈತಪರ-ಕಾರ್ಮಿಕರ ಪರ ಇರುವ ಕಾಯಿದೆಗಳು ಕರ್ನಾಟಕ ಭೂ ಸುಧಾರಣೆ ಕಾಯಿದೆ-1961, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ನಿಯಂತ್ರಣ ಮತ್ತು ಅಭಿವೃದ್ಧಿ ಕಾಯಿದೆ-1966 ಮತ್ತು ಕೈಗಾರಿಕಾ ವ್ಯಾಜ್ಯ ಕಾಯಿದೆ-1947, ಕಾರ್ಖಾನೆ ಕಾಯಿದೆ-1948 ಹಾಗೂ ಗುತ್ತಿಗೆ ಕಾರ್ಮಿಕರ ನಿಯಂತ್ರಣ ಮತ್ತು ನಿರ್ಮೂಲನೆ) ಕಾಯಿದೆಗಳಿಗೆ ಸುಗ್ರೀವಾಜ್ಞೆ  ಮೂಲಕÀ ರೈತ ಮತ್ತು ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಲು ಒತ್ತಾಯಿಸಿ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಸಂಸದರು, ಶಾಸಕರು, ಜಿಪಂ ಸದಸ್ಯರು, ಪಕ್ಷದ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಎಲ್ಲಾ ಸೇರಿ ಶುಕ್ರವಾರ ಬೆಳಿಗ್ಗೆ 12 ಗಂಟೆಗೆ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಛೇರಿವರೆಗೂ ಬಂದು ಡಿಸಿಗೆ ಮನವಿ ಸಲ್ಲಿಸಲಾಗುವುದು. ಕೊರೋನಾ ಇರುವುದರಿಂದ ಸಾಮಾಜಿಕ ಅಂತರದಲ್ಲಿ ಶಾಂತ ರೀತಿಯಲ್ಲಿ ಪ್ರತಿಭಟನೆ ಮಾಡುವುದಾಗಿ ಹೇಳಿದರು. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯಿಂದ ರೈತರ ಬೆಳೆ ನಷ್ಟ ಬಗ್ಗೆ ಮಾಹಿತಿ ಸಂಗ್ರಹಿಸಿ ಸರಕಾರಕ್ಕೆ ಕಳುಹಿಸಿಕೊಡಲು ಹೇಳಲಾಗಿದೆ. ಕಾಲಕಾಲಕ್ಕೆ ನೀರು ಬಿಡುವಂತೆ ಐಸಿಸಿ ಸಭೆಯಲ್ಲಿ ಹೇಳಿದ್ದೇನು. ಒಂದು ತಿಂಗಳ ಹಿಂದೆಯೇ ನೀರಾವರಿ ಸಲಹಾ ಸಮಿತಿ ಮೀಟಿಂಗ್ ಮಾಡುವಂತೆ ಗಮನಸೆಳೆದಿದ್ದೇನು. ಚೀಪ್ ಇಂಜಿನಿಯರ್ ಗೆ, ಎಂಡಿಗೆ ಪವರ್ ನೀಡಿ ಹತ್ತು ದಿನ ನೀರು ಮೊದಲೆ ಬಿಟ್ಟಿದ್ದರೇ ಹೊರಗಡೆ ನೀರು ಬಿಡುವ ಪ್ರಮೆಯೆ ಬರುತ್ತಿರಲಿಲ್ಲ. ಇದರಿಂದ ರೈತರಿಗೆ ಅನುಕೂಲವಾಗುತಿತ್ತು ಎಂದು ನಿರ್ಧಾರಕ್ಕೆ ಅಸಮಧಾನವ್ಯಕ್ತಪಡಿಸಿದರು. ಈಗಾಗಲೇ ಈ ಬಗ್ಗೆ ಅರ್ಜಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ನೀಡಿದ್ದೇನೆ ಎಂದರು.

Post a Comment

Previous Post Next Post