ಹಾಸನದಲ್ಲಿಂದು ಒಟ್ಟು 145 ಕರೋನ ಪಾಸಿಟಿವ್ ಪತ್ತೆ ಜೊತೆಗೆ 3 ಸಾವು

ಹಾಸನ ಜಿಲ್ಲೆಯಲ್ಲಿ  ಇಂದು ಹೊಸದಾಗಿ 145 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ.  ಜೊತೆಗೆ ಇಂದು 3 ಸಾವು ಸಂಭವಿಸಿದೆ ಅದರೊಂದಿಗೆ ಸೋಂಕಿತರ ಸಂಖ್ಯೆ 3731 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ತಿಳಿಸಿದ್ದಾರೆ.

ಇದುವರೆಗೆ 1526 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 2095 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಒಟ್ಟು 110 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದರು. ಕೋವಿಡ್-19 ಉಲ್ಬಣವಾಗುತ್ತಿರುವ ಹನ್ನಲೆಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕರೋನಾ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ಡಾ|| ಸತೀಶ್ ಹೇಳಿದರು.

Post a Comment

Previous Post Next Post