ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಿದ್ದು, 17.32 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಿವೆ ಎಂದು ಎ.ಪಿ.ಎಂ.ಸಿ ಅಧ್ಯಕ್ಷರಾದ ಮಂಜೇಗೌಡ ಅವರು ತಿಳಿಸಿದ್ದಾರೆ.
ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು 3 ಕ್ಯಾಂಟೀನ್‍ಗಳು ಹಾಗೂ ರಾಗಿ ಮತ್ತು ಮೆಕ್ಕೆ ಜೋಳದ ಕಟ್ಟೆಯನ್ನು ನಿರ್ಮಿಸುವ ಸಲುವಾಗಿ ಭೂಮಿ ಪೂಜೆಯನ್ನು ನೆರವೇರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಕ್ರಿಟ್ ರಸ್ತೆ, ಮಳಿಗೆಗಳು, ಹರಾಜು ಕಟ್ಟೆ, ಹೀಗೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಎ.ಪಿ.ಎಂ.ಸಿ ಸದಸ್ಯರು, ಕಾರ್ಯದರ್ಶಿಗಳು ಹಾಗೂ ವರ್ತಕರ ಸಮಿತಿಗಳ ಸಹಕಾರದಿಂದ ಪೂರ್ಣಗೊಳಿಸಲಾಗಿದೆ ಎಂದರು.
ಹಿರಿಯರು ಹಾಗೂ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ ದೇವೇಗೌಡ ಹಾಗೂ ಶಾಸಕರಾದ ಹೆಚ್.ಡಿ ರೇವಣ್ಣ ಅವರ ಸಹಕಾರ ಹಾಗೂ ಮಾರ್ಗದರ್ಶನದಂತೆ ಇನ್ನು ಮುಂದೆಯೂ ಸಹ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದು ಅವರು ತಿಳಿಸಿದರು.
ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷರಾದ ಲಕ್ಷ್ಮಣ್‍ಗೌಡ, ನಿರ್ದೇಶಕರಾದ ಬಿದಿರೆಕೆರೆ ಜಯರಾಮ್, ವರ್ತಕರ ಪ್ರತಿನಿಧಿ ದೇವರಾಜ್ ಹಾಗೂ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Tags
ಹಾಸನ