ಜಿಲ್ಲೆಯಲ್ಲಿಂದು ಹೊಸದಾಗಿ 195 ಜನರಿಗೆ ಕೊರೋನ ಸೋಂಕು ದೃಢ
ಹಾಸನ,ಆ.23(ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಇಂದು 3 ಜನ ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 159ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ 195 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 5970ಕ್ಕೆ ಏರಿಕೆಯಾಗಿದೆ.
ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಸಕ್ರಿಯವಾಗಿ 1865 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 3946 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 59 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಪತ್ತೆಯಾದ 195 ಕೊರೋನ ಸೋಂಕು ಪ್ರಕರಣಗಳಲ್ಲಿ 17 ಜನ ಅರಸೀಕೆರೆ ತಾಲ್ಲೂಕಿನವರು, 15 ಜನ ಚನ್ನರಾಯಪಟ್ಟಣ ತಾಲ್ಲೂಕಿನವರು, ಆಲೂರು ತಾಲ್ಲೂಕಿನಲ್ಲಿ 4 ಜನ , 88 ಜನ ಹಾಸನ ತಾಲ್ಲೂಕು, 21 ಜನ ಹೊಳೆನರಸೀಪುರ ತಾಲ್ಲೂಕು, 15 ಜನ ಅರಕಲಗೂಡು ತಾಲ್ಲೂಕು, ಬೇಲೂರು ತಾಲ್ಲೂಕಿನಲ್ಲಿ 26 ಜನ ಹಾಗೂ ಸಕಲೇಶಪುರ ತಾಲ್ಲೂಕಿನ 9 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.
Tags
ಹಾಸನ