ಶಿವಮೊಗ್ಗದಲ್ಲಿಂದು ಒಟ್ಟು 238 ಕೊರೋನ ಪಾಸಿಟಿವ್ ಪತ್ತೆ ಹಾಗೂ ಸಾವಿನ ಸಂಖ್ಯೆ 7

ಜಿಲ್ಲೆಯಲ್ಲಿ ಇಂದು 238 ಕೊರೋನ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿದೆ. ಒಟ್ಟು ಜಿಲ್ಲೆಯಲ್ಲಿ ಇದುವರೆಗೂ 7731 ಕೊರೋನ ಸೋಂಕಿತರೆಂದು ಎಂದು ಜಿಲ್ಲಾ  ಹೆಲ್ತ್ ಬುಲಿಟಿನ್ ಪ್ರಕಟಿಸಿದೆ.

ಇಂದು ಸಹ ಸೋಂಕಿನಿಂದ 7 ಜನ ಸಾವುಕಂಡಿದ್ದು, ಇದರಿಂದ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 134 ಕ್ಕೇರಿದೆ.  ಜಿಲ್ಲೆಯಲ್ಲಿ ಇದುವರೆಗೂ 1486 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, 1279 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ. 7731 ಜನರಿಗೆ ಕೊರೋನ ಪಾಸಿಟಿವ್ ಎಂದು ವರದಿ ಪ್ರಕಟವಾಗಿದೆ. ಇಂದು 147 ಜನ ಸೋಂಕಿನಿಂದ ಗುಣಮುಖರಾಗಿ ಮೆಗ್ಗಾನ್ ಮತ್ತು ಕೋವಿಡ್ ಕೇರ್ ಸೆಂಟರ್ ನಿಂದ ಬಿಡುಗಡೆಗೊಂಡಿದ್ದಾರೆ.

ಇದರಿಂದ ಒಟ್ಟು ಗುಣಮುಖರಾಗಿರುವ ಸಂಖ್ಯೆಯೂ ಸಹ 5814 ಕ್ಕೇರಿದೆ. 209 ಜನ ಕೊರೋನ ಸೋಂಕಿತರು ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 254 ಜನ ಕೊರೋನ ಕೇರ್ ಸೆಂಟರ್ ನಲ್ಲಿ, 237 ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ, 988 ಜನ ಮನೆಯಲ್ಲಿ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಯುರ್ವೇದಿಕ್ ಕಾಲೇಜಿನ ಆಸ್ಪತ್ರೆಯಲ್ಲಿ 38 ಜನ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟು ಸಕ್ರಿಯೆಗೊಂಡ ಕೊರೋನ ಪಾಸಿಟಿವ್ ಸಂಖ್ಯೆ  1726 ಎಂದು ಬುಲಿಟಿನ್ ತಿಳಿಸಿದೆ.

ಸೋಂಕಿನ ಹೆಚ್ಚಳದಿಂದಾಗಿ ಕಂಟೈನ್ಮೆಂಟ್ ಜೋನ್ ಗಳು ಸಹ ಹೆಚ್ಚಾಗಿವೆ. ನಿನ್ನೆಯ ವರೆಗೆ 3059 ಕಂಟೈನ್ಮೆಂಟ್ ಜೋನ್ ಗಳಿದ್ದ ಜಿಲ್ಲೆಯಲ್ಲಿ ಇಂದು 3289 ಕ್ಕೇರಿದೆ. 1062 ಡಿನೋಟಿಫೈಡ್ ಕಂಟೈನ್ಮೆಂಟ್ ಜೋನ್ ಗಳು 1107 ಎಂದು ಬುಲಿಟಿನ್ ಪ್ರಕಟಿಸಿವೆ.

ತಾಲೂಕ ವಾರು ಹೀಗಿವೆ.

ಜಿಲ್ಲೆಯಲ್ಲಿ 238 ಕೊರೋನ ಪಾಸಿಟಿವ್ ಎಂದು ಪ್ರಕಟಗೊಂಡ ಬೆನ್ನಲ್ಲೇ ತಾಲೂಕವಾರು ಪತ್ತೆಯಾಗಿರುವ ಬಗ್ಗೆ ಮಾಹಿತಿಗಳು ಹೀಗಿವೆ. ಶಿವಮೊಗ್ಗ ನಗರ ಮತ್ತು ತಾಲೂಕಿನಲ್ಲಿ-132 ಭದ್ರಾವತಿಯಲ್ಲಿ-31, ಶಿಕಾರಿಪುರ-38, ತೀರ್ಥಹಳ್ಳಿ-06, ಸಾಗರದಲ್ಲಿ 14, ಹಾಗೂ ಸೊರಬದಲ್ಲಿ 12 ಪ್ರಕರಣಗಳು ಪತ್ತೆಯಾದರೆ, ಇತರೆ ಜಿಲ್ಲೆಯಿಂದ ಬಂದು ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆಯುತ್ತಿರುವವರು 05 ಜನ ಎಂದು ಹೆಲ್ತ್ ಬುಟಿಲಿಟಿನ್ ಪ್ರಕಟಿಸಿದೆ.

Post a Comment

Previous Post Next Post