ಹಾಸನ: ಜಿಲ್ಲೆಯಲ್ಲಿ ದಲಿತರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ದಲಿತರ ಸಂಘಟನೆಗಳ ಒಕ್ಕೂಟದ ವತಿಯಿಂದ ಕೊರೊನಾ ಭೀತಿ ನಡುವೆಯೂ ಸಮಾಜಿಕ ಅಂತರ ಮರೆತು ನಗರದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ದೊಳ್ಳುಕುಣಿತ, ನಾಸೀಕ್ ಡೋಲ್ ಹಾಗೂ ತಮಟೆ ಬಡಿತದೊಂದಿಗೆ ನೀಲಿ ಬಾವುಟ ಹಿಡಿದು ಮೆರವಣಿಗೆಯಲ್ಲಿ ಸಾಗಿದ ಸಾವಿರಾರು ಪ್ರತಿಭಟನಾಕಾರರು ಮಹಾವೀರ ವೃತ್ತ, ಕಸ್ತೂರಬಾ ರಸ್ತೆ ಮೂಲಕ ಎನ್.ಆರ್. ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆದು ಮಾನವ ಸರಪಳಿ ನಿರ್ಮಿಸಿ ದಲಿತರ ಮೇಲಿನ ದೌರ್ಜನ್ಯ ತಡೆಯುವಲ್ಲಿ ಮವಿಫಲವಾಗಿರುವ ಜಿಲ್ಲಾಡಳಿತ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ನಂತರ ಜಿಲ್ಲಾಧಿಕಾರಿ ಕಚೇರಿ ತಲುಪಿ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು.
ಬಿ.ಜೆ.ಪಿ. ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಜಿಲ್ಲೆಯಲ್ಲಿ 7 ಜನ ದಲಿತರ ಹತ್ಯೆಯಾಗಿದೆ. ಅಲ್ಲದೆ ದಲಿತರ ಮೇಲಿನ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಮಾನಭಂಗ, ಜಾತಿ ನಿಂದನೆ ಮುಂತಾದ 106 ವಿವಿಧ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದರೂ ಡಿಸಿ ಹಾಗೂ ಎಸ್ಪಿ ದಲಿತರ ಮೇಲಿನ ದೌರ್ಜನ್ಯ ತಡೆಯಲು ಮುಂದಾಗಿಲ್ಲ ಎಂದು ಆಕ್ರೋಶ ಕಿಡಿಕಾರಿದರು.
ಜಿಲ್ಲೆಯಾದ್ಯಂತ ನಡೆದಿರುವ ಕೊಲೆಗಳು ಹಾಗೂ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಲ್ಲೆಕೋರನನ್ನು ಆರೋಪಿಗಳ ಬಂಧನವಾಗಿರುವ ಎಲ್ಲರನ್ನೂ ತಕ್ಷಣ ಬಂದಿಸುವ ಕೆಲಸ ಮಾಡಬೇಕೆಂದು, ಕೊಲೆಯಾದವರ ಕುಟುಂಬದ ಸದಸ್ಯರೊಬ್ಬರು ಕಾನೂನು ಪ್ರಕಾರ ಸರ್ಕಾರಿ ಕೆಲಸವನ್ನು ಕೊಡಿಸಬೇಕೆಂದು ಹಾಗೂ ಸರ್ಕಾರದಿಂದ ಸಿಗುವ ಪರಿಹಾರವನ್ನು ತುರ್ತಾಗಿ ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.
ದಲಿತ ಸಂಘಟನೆಗಳ ರಾಜ್ಯ ಸಂಚಾಲಕ ಎಂ. ಸೋಮಶೇಖರ್, ದಲಿತ ಮುಖಂಡರಾದ ಹೆಚ್.ಕೆ. ಸಂದೇಶ್, ಛಲವಾದಿ ಸಂಘಟನೆ ಜಿಲ್ಲಾಧ್ಯಕ್ಷ ಪುಟ್ಟರಾಜು, ಮಾದಿಗ ದಂಡೋರ ಮುಖಂಡರಾದ ವಿಜಯಕುಮಾರ್, ದಲಿತ ಮುಕಂಡರಾದ ಕೆ. ಈರಪ್ಪ, ಕುಮಾರಸ್ವಾಮಿ ಇತರರು ಪಾಲ್ಗೊಂಡಿದ್ದರು.
ಸಾರ್ವಜನಿಕರ ಆಕ್ರೋಶ
ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಮದುವೆ ಇನ್ನಿತರ ಸಭೆ ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚು ಜನ ಸೇರದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಆದರೂ ಜಿಲ್ಲಾಡಳಿತ ಸಾವಿರಾರು ಮಂದಿ ಸೇರಿ ಸಾಮಾಜಿಕ ಅಂತರ ಕಾಪಾಡದೆ ಪ್ರತಿಭಟನೆ ನಡೆಸಲು ಅನುಮತಿ ನೀಡಿದ್ದೇಕೆ ಎಂದು ಸಾರ್ವಜನಿಕರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತದ ನಿರ್ಲಕ್ಷ್ಯ:
ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಕಳೆದ ಹದಿನೈದು ದಿನಗಳ ಹಿಂದೆಯೇ ದಲಿತ ಮುಖಂಡರು ಪ್ರತಿ ತಾಲೂಕುಗಳಲ್ಲಿ ಸಭೆ, ಸುದ್ದಿಗೋಷ್ಠಿ ನಡೆಸಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ದಲಿತ ಮುಖಂಡರು ತಿಳಿಸಿದ್ದರು. ಈ ಬಗ್ಗೆ ಎಚ್ಚೆತ್ತುಕೊಂಡು ದಲಿತ ಮುಖಂಡ ಸಭೆ ಕರೆದು ಅವರ ಬೇಡಿಕೆ ಈಡೇರಿಸುವುದಾಗಿ ಮನವೊಲಿಸುವಲ್ಲಿ ವಿಫಲವಾಗಿದ್ದೇ ಮಂಗಳವಾರ ಸಾವಿರಾರು ಜನರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆಸಾವಿರಾರು ಜನರು ಬೀದಿಗಳಿದು ಪ್ರತಿಭಟನೆ ನಡೆಸಲು ಕಾರಣವಾಗಿದೆ.
Tags
ಹಾಸನ