ನಾಳೆ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15 ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. 
 ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನ ಮಂತ್ರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡ ಅವರು ಗೌರವಾನ್ವಿತ ಉಪಸ್ಥಿತಿ ವಹಿಸಲಿರುವರು.  ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಧ್ವಜಾರೋಹಣ ಹಾಗೂ ಸ್ವಾತಂತ್ರೋತ್ಸವದ ಬಗ್ಗೆ ಸಂದೇಶ ನೀಡುವರು.
 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನ ಸಭಾ ಶಾಸಕರಾದ ಪ್ರೀತಮ್ ಜೆ. ಗೌಡ ಅವರು ವಹಿಸಲಿರುವರು. ಸಮಾರಂಭದ ಮುಖ್ಯ ಅತಿಥಿಗಳಿಗಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಎಸ್. ಶ್ವೇತಾ ದೇವರಾಜ್, ಲೋಕಸಭಾ ಕ್ಷೇತ್ರದ ಸಂಸದರಾದ ಪ್ರಜ್ವಲ್ ರೇವಣ್ಣ, ವಿಧಾನ ಸಭೆ ಶಾಸಕರುಗಳಾದ  ಹೆಚ್.ಡಿ. ರೇವಣ್ಣ, ಹೆಚ್.ಕೆ. ಕುಮಾರಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್. ಬಾಲಕೃಷ್ಣ, ಎ.ಟಿ. ರಾಮಸ್ವಾಮಿ, ಕೆ.ಎಸ್. ಲಿಂಗೇಶ್, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಟೇಗೌಡ, ಎಂ.ಎ. ಗೋಪಾಲಸ್ವಾಮಿ ಹಾಗೂ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಜ್ಯೋತಿ ಅಣ್ಣಪ್ಪ ಅವರು  ಉಪಸ್ಥಿತರಿರುವರು.
 ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಎ. ಪರಮೇಶ್ ಅವರು ಕಾರ್ಯಕ್ರಮದಲ್ಲಿ ಹಾಜರಿರುವರು.

Post a Comment

Previous Post Next Post