ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಗೌರವ ಗುಪ್ತ ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಅತೀ ಮಳೆಯಿಂದ ಆಗಿರುವ ಹಾನಿ ಹಾಗೂ ಕೋವಿಡ್ ನಿಯಂತ್ರಣ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಜರುಗಿಸಿದರು.
ಅವರು ಮಾತನಾಡಿ, ಆಗಸ್ಟ್ ತಿಂಗಳಲ್ಲಿ ಜಿಲ್ಲೆಯಲ್ಲಿ ಪ್ರತಿ ವರ್ಷದ ವಾಡಿಕೆ ಮಳೆಗಿಂತ ಹೆಚ್ಚು ಮಳೆ ಆಗಿರುವದರಿಂದಾಗಿ ಬೆಳೆ, ರಸ್ತೆ, ಸೇತುವೆ ಸೇರಿದಂತೆ ಅನೇಕ ರೀತಿಯ ಮೂಲಭೂತ ಸೌಕರ್ಯಗಳಿಗೆ ಹಾನಿಯಾಗಿದೆ. ಈ ಕುರಿತು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸರಿಯಾದ ಸಮೀಕ್ಷೆ ಮಾಡಿ, ನಿಖರ ವರದಿ ಆದಷ್ಟು ಬೇಗನೆ ಸಲ್ಲಿಸಬೇಕು. ಜಿಲ್ಲಾಧಿಕಾರಿಗಳು ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಪ್ರರಿಶೀಲಿಸಬೇಕೆಂದು ತಿಳಿಸಿದರು.
ಕೋವಿಡ್ ಸೋಂಕಿತರಿಗೆ ಸರಿಯಾದ ಚಿಕಿತ್ಸೆ, ಕೋವಿಡ್ ಪರೀಕ್ಷೆ ಹಾಗೂ ಹೊಮ್ ಐಸೊಲೇಶನ್ ಇರುವವರ ಬಗ್ಗೆ ಹೆಚ್ಚು ಕಾಳಜಿವಹಿಸಬೇಕು. ಕೋವಿಡ್ ರಹಿತ ಇತರ ಖಾಯಿಲೆಗಳ ರೋಗಿಗಳಿಗೆ ಎಲ್ಲೆಡೆ ಚಿಕಿತ್ಸೆ ದೊರೆಯುವಂತೆ ಜಿಲ್ಲಾಡಳಿತ ಕ್ರಮವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗೌರವ ಹುಪ್ತ ಹೇಳಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಬೆಳೆಹಾನಿ, ಮನೆ ಹಾನಿ ಬಗ್ಗೆ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡುತ್ತಿದ್ದಾರೆ. ಅತಿವೃಷ್ಟಿ ಹಾನಿ ಕುರಿತು ಆಯಾ ಇಲಾಖೆ ಅಧಿಕಾರಿಗಳು ನಷ್ಟದ ಕುರಿತು ಅಂದಾಜು ವರದಿ ಸಲ್ಲಿಸಿದ್ದು, ಸಮೀಕ್ಷೆ , ಕ್ಷೇತ್ರ ಪರಿಶೀಲನೆ ನಂತರ ಅಂತಿಮ ವರದಿ ನೀಡಲಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದ್ದು, ಕೊರೊನಾ ಚಿಕಿತ್ಸೆ, ಪರೀಕ್ಷೆ, ಔಷದೊಪಚಾರಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಯಾವುದೇ ರೀತಿಯ ಸಮಸ್ಯಗಳಿಲ್ಲ, ಸರಕಾರಿ ಹಾಗೂ ಖಾಸಗಿ ವೈದ್ಯರ ಸಹಕಾರದಲ್ಲಿ ಕೊವೀಡ್ ಹಾಗೂ ನಾನ್ ಕೋವಿಡ್ ಪ್ರಕರಣಗಳನ್ನು ಉತ್ತಮವಾಗಿ ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ಐ.ಬಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಎಸ್.ಬಿ ಚೌಡಣ್ಣವರ, ಪಂಚಾಯತ ರಾಜ್ ಇಂಜನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರ ಮನೋಹರ ಮಂಡೊಲಿ ಅವರು ಅತಿವೃಷ್ಟಿಯಿಂದಾಗಿ ಉಂಟಾಗಿರುವ ಬೆಳೆ, ರಸ್ತೆ, ಸೇತುವೆ, ಮನೆ ಹಾನಿ ಕುರಿತು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಯಶವಂತ ಮದಿನಕರ, ಕಿಮ್ಸ್ ನಿರ್ದೇಶಕ ಡಾ.ರಾಮಚಂದ್ರಪ್ಪ ಅಂಟರಠಾಣಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಕುಮಾರ ಮಾನಕರ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಸುಜಾತಾ ಹಸವಿನಮಠ ಅವರು ಕೋವಿಡ್ ಚಿಕಿತ್ಸೆ, ನಿಯಂತ್ರಣ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಮಹಾನಗರ ಪೊಲೀಸ್ ಆಯುಕ್ತ ಆರ್ ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ್ ವೇದಿಕೆಯಲ್ಲಿದ್ದರು.
ಸಭೆಯಲ್ಲಿ ತೋಟಗಾರಿಕೆ, ಸಣ್ಣ ನೀರಾವರಿ, ಕಂದಾಯ, ರೇಷ್ಮೆ, ಬೃಹತ ನಿರಾವರಿ, ಆಹಾರ ಮತ್ತು ನಾಗರಿಕ ಸರಬರಾಜು, ಸಾರ್ವಜನಿಕ ಶಿಕ್ಷಣ, ಡಿಮಾನ್ಸ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆ ನಂತರ ಜಿಲ್ಲಾ ಉಸ್ತುವಾರಿ ಕರ್ಯದರ್ಶಿ ಗೌರವ ಗುಪ್ತ ಅವರು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರೊಂದಿಗೆ ಶಾಹಿ ಗಾರ್ಮೆಂಟ್ಸ್, ಹೆಸ್ಕಾಂ ಕೇಂದ್ರ ಕಚೇರಿ ಹಾಗೂ ಕಿಮ್ಸ್ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ಚಿಕಿತ್ಸೆ, ದಾಖಲೀಕರಣ ಪರಿಶೀಲಿಸಿದರು.
Tags
ಧಾರವಾಡ