ಸಚಿವರಿಂದ ಯಗಚಿ ಜಲಾಶಯಕ್ಕೆ ಬಾಗಿಣ ಅರ್ಪಣೆ


ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ, ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ  ಸಚಿವರಾದ ಸಿ.ಟಿ. ರವಿ, ಸಂಸದರಾದ ಪ್ರಜ್ವಲ್ ರೇವಣ್ಣ , ಶಾಸಕರಾದ ಕೆ.ಎಸ್. ಲಿಂಗೇಶ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಎಂ.ಎ. ಗೋಪಾಲಸ್ವಾಮಿ ಅವರು ಇಂದು ಯಗಚಿ ಜಲಾಶಯಕ್ಕೆ ಭೇಟಿ ನೀಡಿ ಬಾಗಿಣ ಅರ್ಪಿಸಿದರು.
ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎ. ಪರಮೇಶ್, ಜಿಲ್ಲಾ ಪಂಚಾಯತ್ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

Post a Comment

Previous Post Next Post