ಕೊರೊನಾ ಸೋಂಕಿನಿಂದ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾನ ಗಾರುಡಿಗ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಇದೀಗ ಅಂತರಾಷ್ಟ್ರೀಯ ವೈದ್ಯರ ತಂಡದಿಂದ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬರುತ್ತಿಲ್ಲ. ಈ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಅಂತರಾಷ್ಟ್ರೀಯ ವೈದ್ಯರ ತಂಡವನ್ನು ಕರೆಸಲಾಗಿದ್ದು, ಇಂದಿನಿಂದ ಈ ವೈದ್ಯರ ತಂಡ ಎಸ್.ಪಿ.ಬಿ.ಗೆ ಚಿಕಿತ್ಸೆ ನೀಡಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಆ.5 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಎರಡು ದಿನಗಳಲ್ಲಿ ಚೇತರಿಕೆ ಕಂಡಿದ್ದ ಎಸ್.ಪಿ.ಬಿ. ಮತ್ತೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದೆ.
Tags
ಸಿನಿಮಾ