ಹಾಸನ: ಮಹಿಳೆ ಓರ್ವಳನ್ನು ಅತ್ಯಾಚಾರ ಕೊಲೆ ಮಾಡಿ ಅತ್ಯಾಚಾರ ಮಾಡಿದ ಕಾಮುಕನನ್ನು ಬಂಧಿಸಿ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿ ಆರ್. ಗಿರಿಶ್ ರವರಿಗೆ ಮನವಿ ಸಲ್ಲಿಸಲಾಯಿತು.
ಹಾಸನ ನಗರದ ಹೃದಯ ಭಾಗವಾದ ಎನ್.ಆರ್. ವೃತ್ತದ ಬಳಿ ನಿರ್ಗತಿಕ ಮಹಿಳೆಯನ್ನು ಕಳೆದ ಒಂದು ದಿವಸಗಳ ಹಿಂದೆ ರಾತ್ರಿ ಸಮಯದಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಷ್ಟಕ್ಕೆ ಸುಮ್ಮನಾಗದ ಕಾಮುಕನು ಕೊಲೆ ಮಾಡಿದ ಮೇಲೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇಂತಹ ವಿಕೃತ ಕಾಮಿಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಈಕೆಯ ಕೊಲೆಯಾದ ಮೇಲೆ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದ್ದ ದೃಶ್ಯವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡಿದೆ. ಇದು ಮಾನವ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇಂತಹ ವಿಕೃತ ಕಾಮಿಯನ್ನು ಬಂಧಿಸಿ ಸೂಕ್ತ ಕ್ರಮಜರುಗಿಸಬೇಕು. ಜೊತೆಗೆ ರಾತ್ರಿ ವೇಳೆ ಪೊಲೀಸ್ ಗಸ್ತುವನ್ನು ಇನ್ನು ಹೆಚ್ಚುವರಿಯಾಗಿ ನಿಯೋಜಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪೊಲೀಸ್ ಇಲಾಖೆಗೆ ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಖಾ ಮಂಜುನಾತ್, ತಾಲೂಕು ಅಧ್ಯಕ್ಷೆ ಪದ್ಮಮ್ಮ ಇತರರು ಉಪಸ್ಥಿತರಿದ್ದರು.
Tags
ಹಾಸನ