ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಗುರುವಾರ ಮಧ್ಯರಾತ್ರಿ ನಿಧನರಾದರು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅವರು ಕೊನೆಯುಸಿರೆಳೆದರು.
ಅವರು ಇತ್ತೀಚೆಗೆ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದರು. ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಳ್ಳಾರಿಯ ತಮ್ಮ ಮನೆಗೆ ಮರಳಿದ್ದರು. ಆದರೆ ವಯೋಸಹಜ ತೊಂದರೆಗಳಿಂದ ಅವರು ಮೃತಪಟ್ಟಿದ್ದಾರೆ.
ತಾಯಿಯ ಅಗಲುವಿಕೆಯ ದುಃಖದ ಸಂಗತಿಯನ್ನು ಸಚಿವ ಶ್ರೀರಾಮುಲು ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸಿದ್ದಾರೆ.
Tags
ರಾಜ್ಯ