ಹಾಸನ ಜಿಲ್ಲೆಯ ಉಗನೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷಿ ಪತ್ತಿನ ಸಹಕಾರ ಸಂಘಕ್ಕಿಂದು ಅವಿಸ್ಮರಣೀಯ ದಿನ.
ಹೌದು ದೇಶದ ಪ್ರಧಾನಿ ಸಹಕಾರ ಸಂಘದ ಪ್ರಗತಿ ಹಾಗೂ ರೈತ ಪರ ಕಾರ್ಯಗಳಿಗಾಗಿ ಸಂಸ್ಥೆಯನ್ನು ಗುರುತಿಸಿ ಅದರ ಪ್ರತಿನಿಧಿಗಳೊಂದಿಗೆ ನೇರ ವಿಡಿಯೋ ಸಂವಾದ ಮಾಡಿದ ಕ್ಷಣದ ಸಂಭ್ರಮ ಇದು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿ ಆತ್ಮ ನಿರ್ಭರ್ ಅನ್ನದಾತ ಕುರಿತ ನೇರ ಟಿ.ವಿ. ಸಂವಾದದಲ್ಲಿ ಜಿಲ್ಲೆಯ ಉಗನೆ ಪಂಚಾಯತ್ ನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಬಸವೇಗೌಡ ಅವರೊಂದಿಗೆ ಮಾತನಾಡಿದರು. ಇದು ಇಡೀ ದೇಶದ ಗಮನ ಸೆಳೆದಿದೆ.
ಬಸವೇಗೌಡ ಅವರು ಇಂದು ಉಗಿನೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ದೇವೇಂದ್ರ,ನಿರ್ದೇಶಕ ರಾದ ಮಧನ್,ಮಾಜಿ ಅಧ್ಯಕ್ಷರಾದ ರಾಘವಾಚಾರ್ ರೈತರಾದ ಚಂದ್ರು ಅವರೊಂದಿಗೆ ಬೆಂಗಳೂರಿನ ನಬಾರ್ಡ್ ಕಚೇರಿಯಿಂದ ಪ್ರಧಾನಿಯವರೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಭಾಷಾಂತರಕಾರರ ನೆರವಿನೊಂದಿಗೆ ಬಸವೇಗೌಡ ಅವರೊಂದಿಗೆ ಹಿಂದಿಯಲ್ಲಿ ಮಾತನಾಡಿದ ಪ್ರಧಾನಿ ಸಂಸ್ಥೆಯ ಪ್ರಾರಂಭ, ಬೆಳವಣಿಗೆ, ಸಾಧನೆ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.
ದೇಶದ ರೈತರಿಗೆ 17,500 ಕೋಟಿ ರೂ ಮೊತ್ತದ ಕಿಸಾನ್ ಉಡುಗೊರೆ ಪ್ರಕಟಿಸಿದ ಸಂದರ್ಭದಲ್ಲಿ ನಡೆಸಿದ ವಿಡಿಯೋ ಸಂವಾದದ ಜಿಲ್ಲೆಯ ರೈತರ ಕೃಷಿ ಸಂಬಂಧಿಸಿದ ವಿಷಯಗಳು, ಸಮಸ್ಯೆಗಳನ್ನು ಆಲಿಸಿದ್ದು ವಿಶೇಷವಾಗಿತ್ತು.
.
ಹಾಸನ ಜಿಲ್ಲೆಯ ರೈತರು ಹಾಗೂ ಉಗನೆ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರೊಂದಿಗೆ ಕೃಷಿ ಚಟುವಟಿಕೆಗಳ ಕಾರ್ಯಾಭಿವೃದ್ಧಿ ಕುರಿತು ಸಂವಾದ ನಡೆಸಿ ಮಾತನಾಡಿದ ಅವರು ರೈತರು ಕಿಸಾನ್ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಸಂವಾದದಲ್ಲಿ ಭಾಗಿಯಾಗಿದ್ದ ಜಿಲ್ಲೆಯ ರೈತರಿಗೆ ತಮ್ಮ ಪರಿಚಯ ಹಾಗೂ ಜಿಲ್ಲೆಯಲ್ಲಿನ ಕೃಷಿ ಸಂಬಂಧಿಸಿದ ಸಮಸ್ಯೆಗಳನ್ನು ತಿಳಿಸುವಂತೆ ಕೇಳಿದರು. ಈ ಸಂದರ್ಭದಲ್ಲಿ ಉಗನೆ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಯಾದ ಬಸವೇಗೌಡ ಅವರು ಉತ್ತರಿಸಿ ಕಳೆದ 44 ವರ್ಷಗಳ ಹಿಂದೆ ಸಂಘವನ್ನು ಆರಂಭಿಸಿದ್ದು, 29 ಗ್ರಾಮಗಳ 2,300 ಕಿಸಾನ್ ಕುಟುಂಬಸ್ಥರು ಇದರ ಸದಸ್ಯರಾಗಿದ್ದಾರೆ ಹಾಗೂ ವಾರ್ಷಿಕವಾಗಿ ಸಂಘ 50 ಕೋಟಿ ರೂಗಳ ವಹಿವಾಟು ನಡೆಸುತ್ತದೆ ಎಂದು ವಿವರಿಸಿದರು .
ಜಿಲ್ಲೆಯಲ್ಲಿ ಶುಂಠಿ, ಅಡಿಕೆ, ಮೆಕ್ಕೆಜೋಳ, ಆಲೂಗೆಡ್ಡೆ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯುವುದಾಗಿ ಅವರು ವಿವರಿಸಿದರು.
ಮೋದಿಯವರು ಸಹಕಾರಿ ಸಂಸ್ಥೆಯನ್ನು ಸ್ಥಾಪಿಸುವ ಆಲೋಚನೆ ನಿಮಗೆ ಏಕೆ ಬಂತು ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಸವೇಗೌಡ ಅವರು ರೈತರಿಗೆ ಸ್ಥಳೀಯವಾಗಿ ರಸಗೊಬ್ಬರ, ಬಿತ್ತನೆ ಬೀಜ, ಕಳೆನಾಶಕ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪರಿಕರಗಳು ದೊರೆಯುತ್ತಿರಲಿಲ್ಲ ಹಾಗಾಗಿ ಸಂಸ್ಥೆಯನ್ನು
Tags
ಹಾಸನ