ಕೊರೋನಾ ಸೋಂಕು ರಾಜಕಾರಣಿಗಳನ್ನೂ ಬಿಟ್ಟಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಪುಟದ ಅನೇಕ ಸಚಿವರು ಸೇರಿದಂತೆ ರಾಜ್ಯದ ಬಹುತೇಕ ಜನಪ್ರತಿನಿಧಿಗಳು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಜೆಡಿಎಸ್ನ ಅರಸೀಕೆರೆ ಕ್ಷೇತ್ರದ ಶಾಸಕ ಕೆ. ಎಂ ಶಿವಲಿಂಗೇಗೌಡರಿಗೂ ಕೋವಿಡ್-19 ಪಾಸಿಟಿವ್ ಕಾಣಿಸಿಕೊಂಡಿತ್ತು. ಈ ಬೆನ್ನಲ್ಲೀಗ ಮಾಜಿ ಸಚಿವ ಎಚ್.ಡಿ ರೇವಣ್ಣಗೂ ಕೊರೋನಾ ವಕ್ಕರಿಸಿದೆ.
ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪುತ್ರ ಹಾಗೂ ಹೊಳೆನರಸೀಪುರ ಶಾಸಕರಾದ ಎಚ್.ಡಿ ರೇವಣ್ಣಗೆ ಕೊರೋನಾ ಪಾಸಿಟಿವ್ ಬಂದಿದೆ. ಹೀಗಾಗಿ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
: ಸದ್ಯ ಹೆಚ್.ಡಿ ರೇವಣ್ಣ ಬೆಂಬಲಿಗರು, ಕಾರ್ ಚಾಲಕ ಸೇರಿದಂತೆ ಮನೆಯ ಸದಸ್ಯರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಹಾಗೆಯೇ ಅವರೊಂದಿಗೆ ಇತ್ತೀಚೆಗೆ ಸಂಪರ್ಕ ಹೊಂದಿದ್ದ ಎಲ್ಲರನ್ನು ಕೋವಿಡ್-19 ಟೆಸ್ಟ್ಗೆ ಒಳಗಾಗುವಂತೆ ರೇವಣ್ಣ ಮನವಿ ಮಾಡಿದ್ದಾರೆ.
Tags
ರಾಜ್ಯ