ಶಿವಮೊಗ್ಗದಲ್ಲಿ ಮುಂದುವರಿದ ಅತಿಥಿ ಉಪನ್ಯಾಸಕರು ಮೌನ ಪ್ರತಿಭಟನೆ

ಸೇವೆ ಖಾಯಂಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಅತಿಥಿ ಉಪನ್ಯಾಸಕರು ಮೌನ ಪ್ರತಿಭಟನೆ ಮುಂದುವರೆದಿದೆ . ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು , ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು . ಸೇವೆ ಖಾಯಂಗೊಳಿಸಬೇಕು , ಲಾಕ್ ಡೌನ್ ಅವಧಿಯನ್ನು ಸೇವಾವಧಿ ಎಂದು ಪರಿಗಣಿಸಬೇಕು , ಕೂಡಲೆ ವೇತನ ಬಿಡುಗಡೆ ಮಾಡಬೇಕು , ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕರಿಗೆ 10 ಲಕ್ಷ ರೂ . ಪರಿಹಾರ ನೀಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು . ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿ ಮಂಗಳವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ . ಈ ವಾರವು ಪ್ರತಿಭಟನೆ ಮುಂದುವರೆದಿದೆ .

Post a Comment

Previous Post Next Post