ದೈಹಿಕ ಶಿಕ್ಷಣ ಶಿಕ್ಷಕರ ಜೇಷ್ಠತಾ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ


ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1ರವರ ತಾತ್ಕಾಲಿಕ ಜೇಷ್ಠತಾ ಪಟ್ಟಿಯ ಕರಡನ್ನು 2019ರ ಜ.1 ರಲ್ಲಿ ಇದ್ದಂತೆ ಇಲಾಖಾ ವೈಬ್‍ಸೈಟ್ www.schooleducation.kar.nic.in  ನಲ್ಲಿ ಆ.28 ರಂದು ಪ್ರಕಟಿಸಲಾಗಿದ್ದು, ಸದರಿ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಸಮರ್ಥನೀಯ ಪೂರಕ ದಾಖಲೆಗಳೊಂದಿಗೆ ಸೆ.5 ರಂದು ಶಿಕ್ಷಕರ ಸಹಿ ಹಾಗೂ ಮುಖ್ಯಶಿಕ್ಷಕರ ದೃಢೀಕರಣದೊಂದಿಗೆ ನಿಗಧಿತ ನಮೂನೆಯಲ್ಲಿ ನೇರವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಸನ ಇವರಿಗೆ ಸಲ್ಲಿಸಬಹುದಾಗಿದೆ. ಸದರಿ ನಿಗಧಿತ ದಿನಾಂಕದ ನಂತರ ಬಂದ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ಎಸ್. ಪ್ರಕಾಶ್ ಅವರು ತಿಳಿಸಿದ್ದಾರೆ.

Post a Comment

Previous Post Next Post