ವಿಷ್ಣು ಸ್ಮಾರಕ ಸುಮಾರು ವರ್ಷಗಳಿಂದ ನಿರ್ಮಾಣವಾಗಿರಲಿಲ್ಲ. ಮೈಸೂರಲ್ಲಿ ಅಥವಾ ಬೆಂಗಳೂರಿನಲ್ಲಿ ಸ್ಮಾರಕವನ್ನು ರಚಿಸುವ ಸಂಬಂಧ ತುಂಬಾ ವಿವಾದಗಳು ಇತ್ತು. ಆದರೆ ಈಗ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡಲು ತೀರ್ಮಾನ ಮಾಡಿದ್ದಾರೆ. ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಸ್ಮಾರಕ ನಿರ್ಮಾಣ ಕಾಗಿ 11 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಆನ್ ಲೈನ್ನಲ್ಲಿ ಶಿಲಾನ್ಯಾಸ ನೆರವೇರಿಸಿದ್ದಾರೆ ಇದು ವಿಷ್ಣು ಅಭಿಮಾನಿಗಳಿಗೆ ತುಂಬ ಸಂತೋಷ ಸುದ್ದಿಯಾಗಿದೆ. ಕಡೆಗೂ ಈ ವಿವಾದಕ್ಕೆ ತೆರೆ ಬಿದ್ದಿದೆ. ಬೆಂಗಳೂರಿನ ಒಂದು ಪ್ರಮುಖ ಆರ್ಕಿಟೆಕ್ಟ್ ಕಂಪನಿಗೆ ಇದನ್ನು ನಿರ್ಮಿಸಲು ಅನುಮತಿ ಕೊಟ್ಟಿದೆ. ಭಾರತಿಯವರು ವಿಷ್ಣು ಸ್ಮಾರಕ ಕಂಠೀರವ ಸ್ಟೇಡಿಯಂನಲ್ಲಿ ನಿರ್ಮಾಣ ಮಾಡಬೇಕೆಂದು ತುಂಬಾ ಇಚ್ಛೆ ಪಟ್ಟಿದ್ದರು . ಏಕೆಂದರೆ ವಿಷ್ಣು ಸಮಾಧಿ ಮಾಡಿದ ಸ್ಥಳದಲ್ಲೇ ಸ್ಮಾರಕ ನಿರ್ಮಾಣ ಆಗಬೇಕೆಂದು ಇಚ್ಛೆ ಪಟ್ಟಿದ್ದರು.
ಇದೇ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಭಾರತಿ ವಿಷ್ಣುವರ್ಧನ್, 'ಹಲವು ವರ್ಷಗಳ ನಂತರ ಸ್ಮಾರಕ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ. ಸ್ಮಾರಕ ನಿರ್ಮಾಣ ಆಗಬೇಕೆಂದು ಹಲವರು ಹೋರಾಟ ಮಾಡಿದ್ದರು, ಅಭಿಮಾನಿಗಳು ಸಹ ಇಲ್ಲೇ ಸ್ಮಾರಕ ಆಗಬೇಕೆಂದು ಆಸೆ ಪಟ್ಟಿದ್ದರು. ಅವರ ಆಸೆಯಂತೆ ಸ್ಮಾರಕ ನಿರ್ಮಾಣಕ್ಕೆ ಭೂಮಿಪೂಜೆ ಆಗುತ್ತಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಡಿ ಎಂದು ಮನವಿ ಮಾಡಿದ್ದಾರೆ.
ಮೈಸೂರಿನ ಹೊರ ವಲಯದ ಎಚ್.ಡಿ.ಕೋಟೆ ರಸ್ತೆಯ ಉದ್ಭೂರು ಗೇಟ್ ಬಳಿಯ ಹಾಲಾಳು 5 ಎಕರೆ ನಿವೇಶನದಲ್ಲಿ ಶಿಲಾನ್ಯಾಸ ನಡೆಯಲಿದೆ. ಇದಕ್ಕಾಗಿ ಈಗಾಗಲೇ ಉದ್ದೇಶಿತ 5 ಎಕರೆ ಜಾಗದಲ್ಲಿ ಸ್ಮಾರಕ ನಿರ್ಮಾಣವಾಗಲಿದ್ದು, ಸ್ಥಳದಲ್ಲಿ ಸ್ವಚ್ಛತೆ ಕಾರ್ಯ ಆರಂಭವಾಗಿದೆ. ಇದಕ್ಕಾಗಿ ಸ್ಥಳದಲ್ಲಿ ವಾರ್ತಾ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಕಾರ್ಯಕ್ರಮದಲ್ಲಿ ಡಾ.ಭಾರತಿ ವಿಷ್ಣುವರ್ಧನ್, ಅನಿರುದ್ಧ ,ಕೀರ್ತಿ ವಿಷ್ಣುವರ್ಧನ್ ಪಾಲ್ಗೊಳ್ಳಲಿದ್ದಾರೆ.