ಶಿವಮೊಗ್ಗದಲ್ಲಿಂದು ಒಟ್ಟು 247 ಕರೋನ ಪಾಸಿಟಿವ್ ಪತ್ತೆ

ಜಿಲ್ಲೆಯಲ್ಲಿ ಇಂದು 247 ಕೊರೋನ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿದೆ. ಒಟ್ಟು ಜಿಲ್ಲೆಯಲ್ಲಿ ಇದುವರೆಗೂ 7978 ಕೊರೋನ ಸೋಂಕಿತರೆಂದು ಎಂದು ಜಿಲ್ಲಾ  ಹೆಲ್ತ್ ಬುಲಿಟಿನ್ ಪ್ರಕಟಿಸಿದೆ.

ಇಂದು ಸಹ ಸೋಂಕಿನಿಂದ 1 ಜನ ಸಾವುಕಂಡಿದ್ದು, ಇದರಿಂದ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 135 ಕ್ಕೇರಿದೆ.  ಜಿಲ್ಲೆಯಲ್ಲಿ ಇದುವರೆಗೂ 1196 ಜನರಿಗೆ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿದ್ದು, 763 ಜನರಿಗೆ ನೆಗೆಟಿವ್ ಎಂದು ವರದಿ ಬಂದಿದೆ. 7978 ಜನರಿಗೆ ಕೊರೋನ ಪಾಸಿಟಿವ್ ಎಂದು ವರದಿ ಪ್ರಕಟವಾಗಿದೆ. ಇಂದು 204 ಜನ ಸೋಂಕಿನಿಂದ ಗುಣಮುಖರಾಗಿ ಮೆಗ್ಗಾನ್ ಮತ್ತು ಕೋವಿಡ್ ಕೇರ್ ಸೆಂಟರ್ ನಿಂದ ಬಿಡುಗಡೆಗೊಂಡಿದ್ದಾರೆ.

ಇದರಿಂದ ಒಟ್ಟು ಗುಣಮುಖರಾಗಿರುವ ಸಂಖ್ಯೆಯೂ ಸಹ 6018 ಕ್ಕೇರಿದೆ. 195 ಜನ ಕೊರೋನ ಸೋಂಕಿತರು ಮೆಗ್ಗಾನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 195 ಜನ ಕೊರೋನ ಕೇರ್ ಸೆಂಟರ್ ನಲ್ಲಿ, 250 ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ, 1119 ಜನ ಮನೆಯಲ್ಲಿ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಯುರ್ವೇದಿಕ್ ಕಾಲೇಜಿನ ಆಸ್ಪತ್ರೆಯಲ್ಲಿ 19 ಜನ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟು ಸಕ್ರಿಯಗೊಂಡ ಕೊರೋನ ಪಾಸಿಟಿವ್ ಸಂಖ್ಯೆ  1768 ಎಂದು ಬುಲಿಟಿನ್ ತಿಳಿಸಿದೆ.

ಸೋಂಕಿನ ಹೆಚ್ಚಳದಿಂದಾಗಿ ಕಂಟೈನ್ಮೆಂಟ್ ಜೋನ್ ಗಳು ಸಹ ಹೆಚ್ಚಾಗಿವೆ. ನಿನ್ನೆಯ ವರೆಗೆ 3289 ಕಂಟೈನ್ಮೆಂಟ್ ಜೋನ್ ಗಳಿದ್ದ ಜಿಲ್ಲೆಯಲ್ಲಿ ಇಂದು 3396 ಕ್ಕೇರಿದೆ. 1107 ಡಿನೋಟಿಫೈಡ್ ಕಂಟೈನ್ಮೆಂಟ್ ಜೋನ್ ಗಳು 1167 ಎಂದು ಬುಲಿಟಿನ್ ಪ್ರಕಟಿಸಿವೆ.

Post a Comment

Previous Post Next Post